Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:8 - ಕನ್ನಡ ಸತ್ಯವೇದವು J.V. (BSI)

8 ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳುಕೊಳ್ಳುವದು ಹೇಗೆ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಅಬ್ರಾಮನು, “ಸರ್ವೇಶ್ವರಾ, ಇದು ನನ್ನ ಸೊತ್ತು ಎಂದು ತಿಳಿದುಕೊಳ್ಳುವುದು ಹೇಗೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದಕ್ಕೆ ಅಬ್ರಾಮನು, “ಯೆಹೋವನೇ, ನನ್ನ ಒಡೆಯನೇ, ನನಗೆ ಈ ದೇಶವು ದೊರೆಯುತ್ತದೆಯೆಂದು ಖಚಿತಪಡಿಸಿಕೊಳ್ಳುವುದು ಹೇಗೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕೆ ಅವನು, “ಸಾರ್ವಭೌಮ ಯೆಹೋವ ದೇವರೇ ನಾನು ಅದನ್ನು ನನ್ನ ಸೊತ್ತಾಗಿ ಹೊಂದುವೆನೆಂದು ಯಾವುದರಿಂದ ತಿಳಿದುಕೊಳ್ಳಲಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:8
15 ತಿಳಿವುಗಳ ಹೋಲಿಕೆ  

ಜಕರೀಯನು ಆ ದೂತನಿಗೆ - ಇದನ್ನು ನಾನು ಯಾತರಿಂದ ತಿಳುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ದಿನಹೋದವಳು ಎಂದು ಹೇಳಿದ್ದಕ್ಕೆ


ಮರಿಯಳು ಆ ದೂತನನ್ನು - ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಎಂದು ಕೇಳಿದ್ದಕ್ಕೆ ದೂತನು -


ಹಿಜ್ಕೀಯನು ಯೆಶಾಯನನ್ನು - ಯೆಹೋವನು ನನ್ನನ್ನು ಗುಣಪಡಿಸುವನೆಂಬದಕ್ಕೂ ನಾನು ನಾಡದು ಆತನ ಆಲಯಕ್ಕೆ ಹೋಗುವೆನೆಂಬದಕ್ಕೂ ಗುರುತೇನು ಎಂದು ಕೇಳಿದ್ದಕ್ಕೆ ಅವನು -


ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಹಗೆಗಾರರು ನೋಡಿ - ಯೆಹೋವನು ನೆರವಾಗಿ ಇವನನ್ನು ಸಂತೈಸಿದ್ದಾನೆಂದು ನಾಚಿಕೆಪಡಲಿ.


ಅದಕ್ಕೆ ಆತನು - ನೀನು ಮೂರು ಮೂರು ವರುಷಗಳ ಮಣಕ, ಆಡು, ಟಗರು ಇವುಗಳನ್ನೂ ಬೆಳವಕ್ಕಿಯನ್ನೂ ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ ಅಂದನು.


ಆತನು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಟ್ಟು ತಾನು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದೂ ನೀನು ಪ್ರವಾಸವಾಗಿರುವಂಥದೂ ಆಗಿರುವ ಈ ದೇಶವನ್ನು ನೀನು ಬಾಧ್ಯನಾಗಿ ಹೊಂದುವಂತೆ ಮಾಡಲಿ ಎಂದು ಹೇಳಿ ಆಶೀರ್ವದಿಸಿ ಕಳುಹಿಸಿಬಿಟ್ಟನು.


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ - ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣವಾಗಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನೆಂದು ತಿಳಿದುಕೊಳ್ಳಿರಿ ಎಂದು ಹೇಳಿದನು.


ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗಿ ನನ್ನ ಮುಂದೆ ಮಾಡಿದ ಒಪ್ಪಂದದ ನಿಬಂಧನೆಗಳನ್ನು ಕೈಕೊಳ್ಳದೆ


ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇವಿುನ ಪ್ರಧಾನರು, ಕಂಚುಕಿಗಳು, ಯಾಜಕರು, ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು