ಆದಿಕಾಂಡ 15:9 - ಕನ್ನಡ ಸತ್ಯವೇದವು J.V. (BSI)9 ಅದಕ್ಕೆ ಆತನು - ನೀನು ಮೂರು ಮೂರು ವರುಷಗಳ ಮಣಕ, ಆಡು, ಟಗರು ಇವುಗಳನ್ನೂ ಬೆಳವಕ್ಕಿಯನ್ನೂ ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದಕ್ಕೆ ಆತನು ಯೆಹೋವನಿಗೆ, “ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸರ್ವೇಶ್ವರ ಪ್ರತ್ಯುತ್ತರವಾಗಿ, “ನೀನು ಮೂರು ಮೂರು ವರ್ಷದ ಒಂದು ಕಡಸನ್ನು, ಒಂದು ಆಡನ್ನು, ಒಂದು ಟಗರನ್ನು, ಒಂದು ಬೆಳವಕ್ಕಿಯನ್ನು ಹಾಗು ಒಂದು ಮರಿಪಾರಿವಾಳವನ್ನು ತೆಗೆದುಕೊಂಡು ಬಾ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ಅಬ್ರಾಮನಿಗೆ, “ನಾವು ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ. ಮೂರು ವರ್ಷದ ಒಂದು ಹಸುವನ್ನೂ ಮೂರು ವರ್ಷದ ಒಂದು ಆಡನ್ನೂ ಮತ್ತು ಮೂರು ವರ್ಷದ ಒಂದು ಟಗರನ್ನೂ ತೆಗೆದುಕೊಂಡು ಬಾ. ಇದಲ್ಲದೆ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳವನ್ನೂ ತೆಗೆದುಕೊಂಡು ಬಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದಕ್ಕೆ ಯೆಹೋವ ದೇವರು ಅಬ್ರಾಮನಿಗೆ, “ಮೂರು ವರ್ಷದ ಕಡಸನ್ನು, ಮೂರು ವರ್ಷದ ಮೇಕೆಯನ್ನು, ಮೂರು ವರ್ಷದ ಟಗರನ್ನು, ಒಂದು ಬೆಳವಕ್ಕಿಯನ್ನು, ಒಂದು ಪಾರಿವಾಳವನ್ನು ನನಗಾಗಿ ತೆಗೆದುಕೊಂಡು ಬಾ,” ಎಂದರು. ಅಧ್ಯಾಯವನ್ನು ನೋಡಿ |