Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:1 - ಕನ್ನಡ ಸತ್ಯವೇದವು J.V. (BSI)

1 ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಬ್ರಾಮನ ಹೆಂಡತಿ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಈಜಿಪ್ಟ್ ದೇಶದವಳಾದ ಹಾಗರಳೆಂಬ ಒಬ್ಬ ದಾಸಿ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಾರಯಳು ಅಬ್ರಾಮನ ಹೆಂಡತಿ. ಆಕೆಗೆ ಮಕ್ಕಳಿರಲಿಲ್ಲ. ಸಾರಯಳಿಗೆ ಈಜಿಪ್ಟಿನ ಒಬ್ಬ ಸೇವಕಿಯಿದ್ದಳು. ಅವಳ ಹೆಸರು ಹಾಗರಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಬ್ರಾಮನ ಹೆಂಡತಿ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಹಾಗರಳೆಂಬ ಈಜಿಪ್ಟಿನ ದಾಸಿ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:1
13 ತಿಳಿವುಗಳ ಹೋಲಿಕೆ  

ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು; ಅದೇ ಹಾಗರ್.


ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರತರಿಸಿ ಆಕೆಯ ನಿವಿುತ್ತ ಅಬ್ರಾಮನಿಗೆ ಉಪಕಾರ ಮಾಡಿದನು. ಆಗ ಅಬ್ರಾಮನಿಗೆ ಕುರಿದನಗಳೂ ಗಂಡು ಹೆಣ್ಣು ಕತ್ತೆಗಳೂ ದಾಸದಾಸಿಯರೂ ಒಂಟೆಗಳೂ ದೊರೆತವು.


ಮತ್ತು ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡುಮಗುವದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಇದೇ ಆರನೆಯ ತಿಂಗಳು.


ಆದರೆ ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ದಿನಹೋದವರಾಗಿದ್ದರು.


ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದದರಿಂದ ಅವನಿಗೆ ಮಕ್ಕಳಿರಲಿಲ್ಲ.


ಆಕೆ ಬಂಜೆಯಾಗಿರಲಾಗಿ ಅವನು ಆಕೆಗೋಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.


ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿ ಐಗುಪ್ತದೇಶದಿಂದ ಕನ್ನಿಕೆಯನ್ನು ತರಿಸಿ ಮದುವೆಮಾಡಿಸಿದಳು.


ಆದರೆ ದೇವರು ಅವನಿಗೆ - ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ಕರಕರೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;


ಸಾರಯಳು ಬಂಜೆಯಾಗಿದ್ದದರಿಂದ ಆಕೆಗೆ ಮಕ್ಕಳಿರಲಿಲ್ಲ.


ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ಕೊಡುವೆನೆಂದು ವಾಗ್ದಾನ ಮಾಡಿದನು.


ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ ಯೆಹೋವನು ಆಕೆಗೆ ಮಕ್ಕಳನ್ನು ಕೊಡಲಿಲ್ಲವಾದದರಿಂದ ಆಕೆಗೆ ಒಂದು ಭಾಗವನ್ನು ಮಾತ್ರ ಕೊಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು