Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:13 - ಕನ್ನಡ ಸತ್ಯವೇದವು J.V. (BSI)

13 ಅವಳು - ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡಿದ್ದೇನಲ್ಲಾ ಅಂದುಕೊಂಡು ತನ್ನ ಸಂಗಡ ಮಾತಾಡಿದ್ದ ಯೆಹೋವನಿಗೆ [ಎಲ್ಲವನ್ನೂ] ನೋಡುವ ದೇವರೆಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು" ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು’” ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವ ದೇವರಿಗೆ, “ನೀವು ನನ್ನನ್ನು ನೋಡುವ ದೇವರು,” ಎಂದು ಹೆಸರಿಟ್ಟಳು. ಏಕೆಂದರೆ, “ನನ್ನನ್ನು ನೋಡುವ ದೇವರನ್ನು ನಾನು ಇಲ್ಲಿ ನೋಡಿದೆ,” ಎಂದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:13
14 ತಿಳಿವುಗಳ ಹೋಲಿಕೆ  

ಯಾಕೋಬನು - ನಾನು ದೇವರನ್ನೇ ಪ್ರತ್ಯಕ್ಷವಾಗಿ ನೋಡಿದ್ದೇನಲ್ಲಾ; ಆದರೂ ನನ್ನ ಪ್ರಾಣ ಉಳಿದದೆ ಅಂದುಕೊಂಡು ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ. ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.


ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವದು; ಆತನು ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಲೇ ಇರುವನು.


ನನ್ನ ಹಿರಿಯರ ದೇವರು, ಅಂದರೆ ಅಬ್ರಹಾಮನ ದೇವರೂ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ಆಗಿರುವಾತನು, ನನ್ನ ಪಕ್ಷದಲ್ಲಿ ಇರದಿದ್ದರೆ ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿ. ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸವನ್ನೂ ನೋಡಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು ಅಂದನು.


ಅವಳು ಮರಳುಕಾಡಿನಲ್ಲಿ ಶೂರಿನ ಮಾರ್ಗದ ಒರತೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು -


ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. ಯೆಹೋವನ ಬೆಟ್ಟದಲ್ಲಿ ಒದಗುವದು ಎಂಬದಾಗಿ ಇಂದಿನವರೆಗೂ ಹೇಳುವದುಂಟಲ್ಲಾ.


ಅದು ನನಗೆ ತಿಳಿಯದೆ ಹೋಯಿತು ಅಂದುಕೊಂಡು ಭಯಪಟ್ಟವನಾಗಿ - ಈ ಸ್ಥಳವು ಎಷ್ಟೋ ಭಯಂಕರವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದು ಪರಲೋಕದ ಬಾಗಿಲು ಎಂದು ಹೇಳಿದನು.


ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ಆತನು ಇಸ್ರಾಯೇಲ್ಯರ ಆ ಮುಖಂಡರಿಗೆ ಯಾವ ಕೇಡೂ ಮಾಡಲಿಲ್ಲ; ಅವರು ದೇವರ ದರ್ಶನಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.


ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಅವನು ತೊಡೆಯ ನಿವಿುತ್ತ ಕುಂಟಿಕೊಂಡು ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು