Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:3 - ಕನ್ನಡ ಸತ್ಯವೇದವು J.V. (BSI)

3 ಅಬ್ರಾಮನು ಹತ್ತು ವರುಷ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತ್ಯಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೀಗೆ ಹತ್ತು ವರ್ಷ ಕಾನಾನ್ ನಾಡಿನಲ್ಲಿ ವಾಸಮಾಡಿದ ಮೇಲೆ ಅಬ್ರಾಮನ ಹೆಂಡತಿ ಸಾರಯಳು ಈಜಿಪ್ಟಿನ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಉಪಪತ್ನಿಯಾಗಿ ಒಪ್ಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಬ್ರಾಮನು ಕಾನಾನಿಗೆ ಬಂದು ಹತ್ತು ವರ್ಷಗಳಾದ ಮೇಲೆ ಇದು ನಡೆಯಿತು. ಹೀಗೆ ಸಾರಯಳು ತನ್ನ ಗಂಡನಾದ ಅಬ್ರಾಮನಿಗೆ ಹಾಗರಳನ್ನು ಕೊಟ್ಟಳು. ಹಾಗರಳು ಆಕೆಯ ಈಜಿಪ್ಟಿನ ಸೇವಕಿಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಬ್ರಾಮನು ಕಾನಾನ್ ದೇಶದಲ್ಲಿ ಹತ್ತು ವರ್ಷ ವಾಸಿಸಿದ ತರುವಾಯ, ಅಬ್ರಾಮನ ಹೆಂಡತಿಯಾದ ಸಾರಯಳು ಈಜಿಪ್ಟಿನವಳಾದ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:3
15 ತಿಳಿವುಗಳ ಹೋಲಿಕೆ  

ಆಗ ಸಾರಯಳು ಅಬ್ರಾಮನಿಗೆ - ನನ್ನ ಗೋಳು ನಿನಗೆ ತಗಲಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಾಳೆ; ನಿನಗೂ ನನಗೂ ಯೆಹೋವನೇ ನ್ಯಾಯತೀರಿಸಲಿ ಎಂದು ಹೇಳಲು ಅಬ್ರಾಮನು -


ಹಾಗರ್ ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತ. ಅವಳು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆ ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.


ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಮಂದಿ ಉಪಪತ್ನಿಯರಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.


ದಾವೀದನು ಹೆಬ್ರೋನಿನಿಂದ ಯೆರೂಸಲೇವಿುಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಉಪಪತ್ನಿಯರನ್ನಾಗಿಯೂ ಮಾಡಿಕೊಂಡದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡುಹೆಣ್ಣುಮಕ್ಕಳು ಹುಟ್ಟಿದರು.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.


ಆ ರಾತ್ರಿ ಅವನು ತನ್ನ ಇಬ್ಬರು ಹೆಂಡರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು.


ಲೇಯಳು ತನಗೆ ಹೆರಿಗೆ ನಿಂತುಹೋಗಿರುವದನ್ನು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ಯಾಕೋಬನ ಹೆಂಡತಿಯಾಗುವದಕ್ಕೆ ಒಪ್ಪಿಸಿದಳು.


ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಹೆಂಡತಿಯಾಗುವದಕ್ಕೆ ಒಪ್ಪಿಸಿದಳು.


ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನಾದ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಮಹಲತ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ತನ್ನ ಹೆಂಡರಲ್ಲಿ ಸೇರಿಸಿದನು.


ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿದನು.


ಅವನು ಹಾಗರಳನ್ನು ಕೂಡಲು ಬಸುರಾದಳು. ತಾನು ಬಸುರಾದೆನೆಂದು ತಿಳುಕೊಂಡಾಗ ಅವಳು ಯಾಜಮಾನಿಯನ್ನು ತಾತ್ಸಾರ ಮಾಡಿದಳು.


ಅವಳು ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.


ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿ ಐಗುಪ್ತದೇಶದಿಂದ ಕನ್ನಿಕೆಯನ್ನು ತರಿಸಿ ಮದುವೆಮಾಡಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು