ಆದಿಕಾಂಡ 16:6 - ಕನ್ನಡ ಸತ್ಯವೇದವು J.V. (BSI)6 ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳೆ; ಮನಸ್ಸುಬಂದಂತೆ ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದಕ್ಕೆ ಅಬ್ರಾಮನು, “ನಿನ್ನ ದಾಸಿ ನಿನ್ನ ಕೈಯಲ್ಲೇ ಇದ್ದಾಳೆ. ನಿನಗಿಷ್ಟ ಬಂದಂತೆ ಮಾಡು,” ಎಂದುಬಿಟ್ಟನು. ಬಳಿಕ ಸಾರಯಳು ಕೊಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಹಾಗರಳು ಓಡಿಹೋದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅದಕ್ಕೆ ಅಬ್ರಾಮನು ಸಾರಯಳಿಗೆ, “ನೀನು ಹಾಗರಳ ಯಜಮಾನಿ. ನೀನು ಅವಳಿಗೆ ಏನುಬೇಕಾದರೂ ಮಾಡಬಹುದು” ಎಂದು ಹೇಳಿದನು. ಆದ್ದರಿಂದ ಸಾರಯಳು ಹಾಗರಳನ್ನು ಶಿಕ್ಷಿಸಿದಳು. ಆಗ ಹಾಗರಳು ಓಡಿಹೋದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಅಬ್ರಾಮನು ಸಾರಯಳಿಗೆ, “ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ. ನಿನ್ನ ಮನಸ್ಸಿಗೆ ಬಂದಂತೆ ಮಾಡು,” ಎಂದನು. ಆಗ ಸಾರಯಳು ಹಾಗರಳನ್ನು ಬಾಧಿಸಿದ್ದರಿಂದ, ಅವಳು ಸಾರಯಳಿಂದ ಓಡಿ ಹೋದಳು. ಅಧ್ಯಾಯವನ್ನು ನೋಡಿ |