Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:8 - ಕನ್ನಡ ಸತ್ಯವೇದವು J.V. (BSI)

8 ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ ಎಂದು ಕೇಳಲು ಅವಳು - ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವದೂತನು ಅವಳಿಗೆ, “ಹಾಗರಳೇ, ನೀನು ಸಾರಯಳ ಸೇವಕಿಯಾಗಿದ್ದರೂ ಯಾಕೆ ಇಲ್ಲಿರುವೆ? ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಹಾಗರಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಿರುವೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಸಾರಯಳ ದಾಸಿ ಹಾಗರಳೇ, ನೀನು ಎಲ್ಲಿಂದ ಬಂದೆ? ನೀನು ಎಲ್ಲಿಗೆ ಹೋಗುತ್ತೀ?” ಎಂದು ವಿಚಾರಿಸಿದನು. ಅವಳು, “ನನ್ನ ಯಜಮಾನಿ ಸಾರಯಳನ್ನು ಬಿಟ್ಟು ಓಡಿ ಹೋಗುತ್ತಿದ್ದೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:8
15 ತಿಳಿವುಗಳ ಹೋಲಿಕೆ  

ಯೆಹೋವದೇವರು ಮನುಷ್ಯನನ್ನು -


ಅದಕ್ಕೆ ಯೆಹೋವನು - ನೀನು ಏನು ಮಾಡಿದಿ? ನಿನ್ನ ತಮ್ಮನ ರಕ್ತವು ಭೂವಿುಯ ಕಡೆಯಿಂದ ನನ್ನನ್ನು ಕೂಗುತ್ತದೆ, ಕೇಳು.


ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ; ತಾಳ್ಮೆಯು ದೊಡ್ಡ ದೋಷಗಳನ್ನು ಅಡಗಿಸುತ್ತದಲ್ಲವೆ.


ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.


ಅವನು ಹಾಗರಳನ್ನು ಕೂಡಲು ಬಸುರಾದಳು. ತಾನು ಬಸುರಾದೆನೆಂದು ತಿಳುಕೊಂಡಾಗ ಅವಳು ಯಾಜಮಾನಿಯನ್ನು ತಾತ್ಸಾರ ಮಾಡಿದಳು.


ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.


ಅದಕ್ಕೆ ಯೆಹೋವನ ದೂತನು - ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ತಗ್ಗಿ ನಡೆದುಕೋ ಅಂದನು.


ಅಲ್ಲಿನ ಒಂದು ಗವಿಯಲ್ಲಿ ಇಳುಕೊಂಡನು. ಆಗ ಅವನಿಗೆ ಯೆಹೋವನಿಂದ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು.


ಕಡೆಗೆ ಮಂದಮಾರುತ ಶಬ್ದ! ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು.


ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು - ಹಾಗರಳೇ, ನಿನಗೇನಾಯಿತು? ಅಂಜಬೇಡ; ಆ ಹುಡುಗನು ಬಿದ್ದಿರುವ ಸ್ಥಳದಿಂದಲೇ ಅವನ ಶಬ್ದವು ದೇವರಿಗೆ ಕೇಳಿಸಿತು;


ಈ ಮುದುಕನು ಬೀದಿಯಲ್ಲಿ ಕೂತಿದ್ದ ಆ ದಾರಿಗನನ್ನು ಕಂಡು - ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ ಎಂದು ಕೇಳಲು


ಅವರು ಹೋದನಂತರ ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು - ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿ ಎಂದು ಕೇಳಿದನು. ಅದಕ್ಕೆ ಅವನು - ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು