Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:15 - ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ದೇವರು ಅಬ್ರಹಾಮನಿಗೆ - ನೀನು ಇನ್ನು ಮುಂದೆ ನಿನ್ನ ಪತ್ನಿಯನ್ನು ಸಾರಯಳೆಂದು ಕರೆಯದೆ ಸಾರಾ ಎಂದು ಕರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೇವರುಅಬ್ರಹಾಮನಿಗೆ ಇನ್ನೂ ಹೇಳಿದ್ದು ಏನೆಂದರೆ: “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳು ಎಂದು ಕರೆಯದೆ ಸಾರಳು ಎಂದು ಕರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ, ಸಾರಯಳಿಗೆ ನಾನು ಒಂದು ಹೆಸರನ್ನು ಕೊಡುತ್ತೇನೆ. ಆಕೆಯ ಹೊಸ ಹೆಸರು ಸಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಯಳ ವಿಷಯದಲ್ಲಾದರೋ, ಆಕೆಯನ್ನು ಸಾರಯಳೆಂದು ಕರೆಯಬೇಡ, ಅವಳ ಹೆಸರು, ‘ಸಾರಾ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:15
7 ತಿಳಿವುಗಳ ಹೋಲಿಕೆ  

ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಆತನಿಗೋಸ್ಕರವಾಗಿ ಆ ಹುಡುಗನಿಗೆ ಯೆದೀದ್ಯನು ಎಂದು ಹೆಸರಿಟ್ಟನು.


ಅವನು ಯಾಕೋಬನಿಗೆ - ಇನ್ನು ಮೇಲೆ ನೀನು ಯಾಕೋಬನೆನ್ನಿಸಿಕೊಳ್ಳುವದಿಲ್ಲ; ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದ್ದರಿಂದ ನಿನಗೆ ಇಸ್ರಾಯೇಲೆಂದು ಹೆಸರುಂಟಾಗುವದು ಎಂದು ಹೇಳಿದನು.


ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲ ಪಿತೃವಾಗಿ ನೇವಿುಸಿರುವದರಿಂದ ನಿನಗೆ ಅಬ್ರಹಾಮನೆಂದು ಹೆಸರಿರುವದು.


ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ವಿುಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ವಿುಲ್ಕಳಿಗೂ ಇಸ್ಕಳಿಗೂ ತಂದೆ.


ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಮೀರಿದವನಾದ ಕಾರಣ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳಿದನು.


ನಾನು ಆಕೆಯನ್ನು ಆಶೀರ್ವದಿಸಿ ಆಕೆಯಲ್ಲಿ ನಿನಗೆ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು ಎಂದು ಹೇಳಲು ಅಬ್ರಹಾಮನು ಅಡ್ಡಬಿದ್ದು ನಕ್ಕು -


ಸದ್ಧರ್ಮನಿರತರಾದ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರಿ, ಯಾವ ಗುಂಡಿಯಿಂದ ತೋಡಲ್ಪಟ್ಟಿರಿ ಎಂಬದನ್ನು ನೋಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು