ಆದಿಕಾಂಡ 17:23 - ಕನ್ನಡ ಸತ್ಯವೇದವು J.V. (BSI)23 ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದೇ ದಿನದಂದು ಅಬ್ರಹಾಮನು ದೇವರ ಅಪ್ಪಣೆಯ ಪ್ರಕಾರ ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲ ಗಂಡಸರಿಗೂ ಮನೆಯಲ್ಲಿ ಹುಟ್ಟಿದ ಹಾಗು ತಾನು ಕ್ರಯಕ್ಕೆ ಕೊಂಡುಕೊಂಡ ಜೀತದಾರರಿಗೂ ಸುನ್ನತಿಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅದೇ ದಿನದಲ್ಲಿ ಅಬ್ರಹಾಮನು ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡುಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ದೇವರು ಹೇಳಿದಂತೆಯೇ ಸುನ್ನತಿ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅಬ್ರಹಾಮನು ತನ್ನ ಮಗ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರಿಗೂ ತಾನು ಕ್ರಯಕ್ಕೆ ತೆಗೆದುಕೊಂಡವರೆಲ್ಲರಿಗೂ ಹೀಗೆ ತನ್ನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ದೇವರು ತನಗೆ ಹೇಳಿದ ಹಾಗೆ, ಆ ದಿನವೇ ಸುನ್ನತಿ ಮಾಡಿಸಿದನು. ಅಧ್ಯಾಯವನ್ನು ನೋಡಿ |