Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:4 - ಕನ್ನಡ ಸತ್ಯವೇದವು J.V. (BSI)

4 ನಾನಂತೂ ನಿನಗೆ ವಾಗ್ದಾನಮಾಡುತ್ತೇನೆ; ಏನಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೇವರು ಅವನಿಗೆ, “ನಾನು ನಿನಗೆ ವಾಗ್ದಾನ ಮಾಡಿ ಹೇಳುತ್ತೇನೆ: ನೀನು ಅನೇಕ ರಾಷ್ಟ್ರಗಳಿಗೆ ಮೂಲಪುರುಷನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನಾನು ನಿನಗೆ ಮಾಡುವ ವಾಗ್ದಾನವೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಾನಾದರೋ ಈ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ: ನೀನು ಅನೇಕ ರಾಷ್ಟ್ರಗಳಿಗೆ ತಂದೆಯಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:4
16 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ಸರ್ವಶಕ್ತನಾದ ದೇವರು. ನೀನು ಬಹು ಸಂತಾನವುಳ್ಳವನಾಗಿ ಹೆಚ್ಚು. ನಿನ್ನಿಂದ ಜನಾಂಗವುಂಟಾಗುವದು; ಅನೇಕ ಜನಾಂಗಗಳೂ ಅರಸರೂ ನಿನ್ನಿಂದ ಹುಟ್ಟುವರು.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಅದರೆ ಅವನ ತಂದೆ ಒಪ್ಪದೆ - ಮಗನೇ, ನಾನು ಬಲ್ಲೆ, ಬಲ್ಲೆ; ಇವನಿಂದಲೂ ಜನಾಂಗವುಂಟಾಗುವದು; ಇವನೂ ಬಲಿಷ್ಠನಾಗುವನು; ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು; ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು ಎಂದು ಹೇಳಿದನು.


ನಿನಗೆ ಒಳ್ಳೇದನ್ನು ಮಾಡಿ ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲವೇ ಅಂದನು.


ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.


ಅದಲ್ಲದೆ ಯೆಹೋವನ ದೂತನು ಅವಳಿಗೆ - ನಿನಗೆ ಬಹುಸಂತಾನವಾಗ ಮಾಡುವೆನು; ಅದು ಲೆಕ್ಕಿಸಕೂಡದಷ್ಟು ಅಪರಿವಿುತವಾಗುವದು ಎಂದು ಹೇಳಿದನು.


ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು.


ಯೆಹೋವನು ಆಕೆಗೆ - ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಅವೆ; ಆ ಎರಡು ಜನಾಂಗಗಳು ಜನ್ಮಾರಭ್ಯ ವಿರೋಧದಿಂದ ಭೇದವಾಗುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವದು; ಹಿರಿಯದು ಕಿರಿಯದಕ್ಕೆ ಸೇವೆ ಮಾಡುವದು ಎಂದು ಹೇಳಿದನು.


ನಾನು ಅವರಿಗೆ - ನೀವು ಪ್ರವಾಸವಾಗಿರುವ ಕಾನಾನ್ ದೇಶವನ್ನು ನಿಮಗೇ ಕೊಡುವೆನೆಂಬದಾಗಿ ದೃಢವಾಗಿ ವಾಗ್ದಾನ ಮಾಡಿದೆನಷ್ಟೆ.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು