ಆದಿಕಾಂಡ 17:5 - ಕನ್ನಡ ಸತ್ಯವೇದವು J.V. (BSI)5 ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲ ಪಿತೃವಾಗಿ ನೇವಿುಸಿರುವದರಿಂದ ನಿನಗೆ ಅಬ್ರಹಾಮನೆಂದು ಹೆಸರಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇನ್ನು ಮುಂದೆ ನಿನಗೆ ‘ಅಬ್ರಾಮ’ ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಟ್ರಗಳಿಗೆ ಮೂಲಪುರುಷನನ್ನಾಗಿ ನೇಮಿಸುವುದರಿಂದ ನಿನಗೆ ‘ಅಬ್ರಹಾಮ’ ಎಂಬ ಹೆಸರಿರುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ‘ಅಬ್ರಾಮ’ ಎಂಬ ನಿನ್ನ ಹೆಸರನ್ನು ಬದಲಾಯಿಸಿ ನಿನಗೆ ‘ಅಬ್ರಹಾಮ’ ಎಂದು ಹೆಸರಿಡುವೆನು. ನಿನ್ನನ್ನು ಅಬ್ರಹಾಮ ಎಂದೇ ಕರೆಯುವರು; ಯಾಕೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇನ್ನು ಮುಂದೆ, ‘ಅಬ್ರಾಮ್’ ಎಂದು ನಿನಗೆ ಹೆಸರಿರುವುದಿಲ್ಲ. ನಿನ್ನ ಹೆಸರು, ‘ಅಬ್ರಹಾಮ’ ಎಂದು ಇರುವುದು. ಏಕೆಂದರೆ ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ. ಅಧ್ಯಾಯವನ್ನು ನೋಡಿ |