ಆದಿಕಾಂಡ 17:7 - ಕನ್ನಡ ಸತ್ಯವೇದವು J.V. (BSI)7 ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದು ನಾನು ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು. ಅಧ್ಯಾಯವನ್ನು ನೋಡಿ |