Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:1 - ಕನ್ನಡ ಸತ್ಯವೇದವು J.V. (BSI)

1 ಅಬ್ರಹಾಮನು ಮಧ್ಯಾಹ್ನದಲ್ಲಿ ಮಮ್ರೇತೋಪಿನ ತನ್ನ ಗುಡಾರದ ಬಾಗಲಲ್ಲಿ ಕೂತಿರುವಾಗ ಯೆಹೋವನು ಅವನಿಗೆ ದರ್ಶನಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂದು ದಿನ ಅಬ್ರಹಾಮನು ಉರಿಬಿಸಿಲ ವೇಳೆಯಲ್ಲಿ ಮಮ್ರೋತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿದ್ದನು. ಆಗ ಅವನಿಗೆ ಸರ್ವೇಶ್ವರ ಸ್ವಾಮಿಯ ದರ್ಶನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಬ್ರಹಾಮನು ಮಮ್ರೆಯಲ್ಲಿದ್ದ ಓಕ್ ಮರಗಳ ತೋಪಿನ ಸಮೀಪದಲ್ಲಿ ವಾಸಿಸುತ್ತಿದ್ದಾಗ ಯೆಹೋವನು ಅವನಿಗೆ ಕಾಣಿಸಿಕೊಂಡನು. ಅಂದು ಬಿಸಿಲಿನ ತಾಪದಿಂದಾಗಿ ಅಬ್ರಹಾಮನು ತನ್ನ ಗುಡಾರದ ಬಾಗಿಲ ಬಳಿ ಕುಳಿತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮಮ್ರೆಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡರು. ಹಗಲಿನ ಬಿಸಿಲಿನಲ್ಲಿ ಅವನು ಡೇರೆಯ ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:1
17 ತಿಳಿವುಗಳ ಹೋಲಿಕೆ  

ತಪ್ಪಿಸಿಕೊಂಡವನೊಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಇದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನು ಎಷ್ಕೋಲ ಆನೇರರಿಗೆ ಸಹೋದರನು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.


ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರಹಾಕಿಸಿಕೊಳ್ಳುತ್ತಾ ಹೆಬ್ರೋನಿನಲ್ಲಿರುವ ಮಮ್ರೆ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.


ಯಾಕೋಬನು ಯೋಸೇಫನಿಗೆ - ಸರ್ವಶಕ್ತನಾದ ದೇವರು ಕಾನಾನ್‍ದೇಶದ ಲೂಜಿನಲ್ಲಿ ನನಗೆ ದರ್ಶನಕೊಟ್ಟು ಆಶೀರ್ವದಿಸಿ -


ಅಲ್ಲಿ ಯೆಹೋವನು ಅವನಿಗೆ ದರ್ಶನಕೊಟ್ಟು - ನೀನು ಐಗುಪ್ತದೇಶಕ್ಕೆ ಇಳಿದುಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು


ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ದರ್ಶನಕೊಟ್ಟು - ನಿನಗೆ ಯಾವ ವರ ಬೇಕು, ಕೇಳಿಕೋ ಎಂದು ಹೇಳಲು ಸೊಲೊಮೋನನು ಆತನಿಗೆ -


ಆಗ ದೇವರು ಅಬ್ರಹಾಮನ ಸಂಗಡ ಮಾತಾಡುವದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಹೋದನು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ಅದಕ್ಕೆ ಮೋಶೆ - ಚಿತ್ತೈಸು; ಅವರು ನನ್ನನ್ನು ನಂಬದೆ ನನ್ನ ಮಾತಿಗೆ ಕಿವಿಗೊಡದೆ ಹೋದಾರು; ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲವೆಂದು ಹೇಳಾರು ಎನ್ನಲು,


ನಂಬಿಕೆಯಿಂದಲೇ ಅವನು ವಾಗ್ದಾತ್ತದೇಶಕ್ಕೆ ಬಂದಾಗ ಅಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಡೇರೆಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ಅತಿಥಿಸತ್ಕಾರಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಆ ಮನುಷ್ಯರು ಅಲ್ಲಿಂದ ಸೊದೋವಿುನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನ ಎದುರಾಗಿ ಇನ್ನೂ ನಿಂತನು.


ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಹೋಗುತ್ತಾ ಹೋಗುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿಕೊಂಡು ಕೆಲವು ಕಾಲ ಗೆರಾರಿನಲ್ಲಿ ಇದ್ದನು.


ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೊನೆಂಬ ಕಿರ್ಯತರ್ಬಕ್ಕೆ ಸೇರಿರುವದು; ಅದೇ ಅಬ್ರಹಾಮ್ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿದ್ದಾಗ ಒಂದಾನೊಂದು ದಿನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವದನ್ನು ಕಂಡನು. ಅವನು ಅವನ ಬಳಿಗೆ ಹೋಗಿ - ನೀನು ನಮ್ಮವನೋ ಅಥವಾ ಶತ್ರುಪಕ್ಷದವನೋ ಎಂದು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು