Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:12 - ಕನ್ನಡ ಸತ್ಯವೇದವು J.V. (BSI)

12 ನನ್ನಂಥ ಮುದುಕಿಗೆ ಭೋಗವಾದೀತೇ? ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎಂತಲೇ ಆಕೆ, “ನನ್ನಂಥ ಮುದುಕಿಗೆ ಸಂಭೋಗ ಸಾಧ್ಯವೆ? ನನ್ನ ಯಜಮಾನರೂ ಮುದುಕರಲ್ಲವೆ?” ಎಂದುಕೊಂಡು ನಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಸಾರಳಿಗೆ ನಂಬಲಾಗಲಿಲ್ಲ. ಆಕೆ ತನ್ನೊಳಗೆ, “ಈಗಾಗಲೇ ನನಗೆ ವಯಸ್ಸಾಗಿದೆ; ನನ್ನ ಗಂಡನಿಗೂ ವಯಸ್ಸಾಗಿದೆ” ಅಂದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಸಾರಳು ತನ್ನೊಳಗೆ ನಕ್ಕು, “ನಾನು ವೃದ್ಧಳಾಗಿದ್ದೇನೆ, ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರುವಲ್ಲಿ ನನ್ನಿಂದ ಮಗುವನ್ನು ಹೆರುವದಾದೀತೇ?” ಎಂದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:12
12 ತಿಳಿವುಗಳ ಹೋಲಿಕೆ  

ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು ಎಂದು ಬರೆದದೆ. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ.


ನೂರು ವರುಷದವನಿಗೆ ಮಗ ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆತ್ತಾಳೇ ಎಂದು ಮನಸ್ಸಿನಲ್ಲಿ ಅಂದುಕೊಂಡು ದೇವರಿಗೆ -


ಯೆಹೋವನು ಅಬ್ರಹಾಮನಿಗೆ - ಸಾರಳು ನಕ್ಕು ಮುದುಕಿಯಾದ ನಾನು ಮಗುವನ್ನು ಹೆರುವದಾದೀತೇ ಎಂದು ಹೇಳಿದ್ದೇನು?


ಅದಿರಲಿ; ನಿಮ್ಮಲ್ಲಿ ಪ್ರತಿಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಹೆಂಡತಿಯು ತನ್ನ ಗಂಡನಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು.


ಆಗ ನಮ್ಮ ಬಾಯಿ ಬಲು ನಗೆಯಿಂದಲೂ ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು - ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆಂದು ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.


ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನಿಗೆ ನಮಸ್ಕರಿಸು.


ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳುಕೊಂಡಿದ್ದ ಮನೆಯ ಬಾಗಲಲ್ಲಿ ಬಿದ್ದವಳು ಬೆಳಗಾದರೂ ಏಳಲೇ ಇಲ್ಲ.


ಎಲೀಷನು ಆಕೆಗೆ - ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವಿ ಅಂದನು. ಅದಕ್ಕೆ ಆಕೆಯು - ದೇವರ ಮನುಷ್ಯನೇ, ಒಡೆಯನೇ, ಹೀಗೆ ಹೇಳಿ ನಿನ್ನ ದಾಸಿಯನ್ನು ವಂಚಿಸಬೇಡ ಎಂದು ನುಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು