Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:16 - ಕನ್ನಡ ಸತ್ಯವೇದವು J.V. (BSI)

16 ಆ ಮನುಷ್ಯರು ಅಲ್ಲಿಂದ ಹೊರಟು ಸೊದೋವಿುನ ಕಡೆಗೆ ನೋಡಿದರು; ಅಬ್ರಹಾಮನು ಅವರನ್ನು ಸಾಗಕಳುಹಿಸುತ್ತಾ ಅವರ ಜೊತೆಯಲ್ಲೇ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮ್ ಕಾಣಿಸುತ್ತಿದ್ದ ಒಂದು ಸ್ಥಳಕ್ಕೆ ಬಂದರು. ಅವರನ್ನು ಸಾಗಕಳುಹಿಸುತ್ತಾ ಅಬ್ರಹಾಮನೂ ಅವರ ಜೊತೆಯಲ್ಲೇ ಅಲ್ಲಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಮೇಲೆ ಆ ಪುರುಷರು ಹೋಗಲು ಎದ್ದುನಿಂತರು. ಅವರು ಸೊದೋಮಿನ ಕಡೆಗೆ ಕಣ್ಣೆತ್ತಿ ನೋಡಿ ಆ ಕಡೆಗೆ ನಡೆಯಲಾರಂಭಿಸಿದರು. ಅವರನ್ನು ಕಳುಹಿಸಿಕೊಡಲು ಅಬ್ರಹಾಮನು ಅವರ ಸಂಗಡ ಸ್ವಲ್ಪದೂರ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡುವುದಕ್ಕೆ ಅವರ ಸಂಗಡ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:16
9 ತಿಳಿವುಗಳ ಹೋಲಿಕೆ  

ಆ ದಿವಸಗಳನ್ನು ತೀರಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ಹೆಂಡರು ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಸಾಗಕಳುಹಿಸಿದರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆಮಾಡಿ


ಸಭೆಯವರು ಅವರನ್ನು ಸಾಗಕಳುಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.


ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿಹೇಳಿದರು. ಅವರನ್ನು ನೀನು ದೇವರ ಸೇವಕರಿಗೆ ಯೋಗ್ಯವಾದ ರೀತಿಯಿಂದ ಸಾಗ ಕಳುಹಿಸಿದರೆ ಚೆನ್ನಾಗಿರುವದು.


ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂಬ ಅಭಿಪ್ರಾಯ ಉಂಟು. ತರುವಾಯ ನಿಮ್ಮ ಸಹವಾಸದಲ್ಲಿ ನನಗೆ ಸ್ವಲ್ಪಮಟ್ಟಿಗೆ ಸಂತೃಪ್ತಿಯಾದ ಮೇಲೆ ನೀವು ಆ ದೇಶಕ್ಕೆ ನನ್ನ ಪ್ರಯಾಣವನ್ನು ಸಾಗಿಸುವಿರೆಂದು ನಂಬುತ್ತೇನೆ.


ಹೇಗಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನ ಎದುರಿನಲ್ಲಿ ಯಾರೋ ಮೂರು ಮಂದಿ ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವದಕ್ಕೆ ಅವನು ಗುಡಾರದ ಬಾಗಲಿನಿಂದ ಓಡಿ ಹೋಗಿ


ಆಗ ಸಾರಳು ಭಯಪಟ್ಟು - ನಾನು ನಗಲಿಲ್ಲ ಎಂದು ಬೊಂಕಲು ಆತನು- ಹಾಗನ್ನಬೇಡಮ್ಮಾ, ನೀನು ನಕ್ಕದ್ದುಂಟು ಅಂದನು.


ಆ ಮನುಷ್ಯರು ಅಲ್ಲಿಂದ ಸೊದೋವಿುನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನ ಎದುರಾಗಿ ಇನ್ನೂ ನಿಂತನು.


ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋವಿುಗೆ ಬಂದಾಗ ಲೋಟನು ಸೊದೋವಿುನ ಊರುಬಾಗಲಲ್ಲಿ ಕೂತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು ಎದುರುಗೊಂಡು ಬೊಗ್ಗಿ ನಮಸ್ಕರಿಸಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು