Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:25 - ಕನ್ನಡ ಸತ್ಯವೇದವು J.V. (BSI)

25 ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:25
35 ತಿಳಿವುಗಳ ಹೋಲಿಕೆ  

ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನು ನೀತಿಯನ್ನು ಡೊಂಕುಮಾಡುವನೋ?


ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವದಿಲ್ಲ, ಕೆಡುಕರನ್ನು ಕೈಹಿಡಿಯುವದಿಲ್ಲ.


ನೀತಿವಂತನಿಗೆ ಫಲವುಂಟೆಂತಲೂ ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ಪ್ರತಿಫಲವನ್ನು ಕೊಡು.


ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.


ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.


ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ಧರ್ಮಿಯು ತನ್ನ ಧರ್ಮದಲ್ಲಿಯೇ ನಶಿಸುವದುಂಟು; ಅಧರ್ಮಿಯು ತನ್ನ ಅಧರ್ಮದಲ್ಲಿಯೇ ಬಹು ದಿನ ಬದುಕುವದುಂಟು; ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.


ಪರಲೋಕದಲ್ಲಿ ಹೆಸರು ಬರಸಿಕೊಂಡಿರುವ ಚೊಚ್ಚಲಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಸಿದ್ಧಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ


ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?


ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ - ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು; ಅವರು ಇಸ್ರಾಯೇಲ್ಯರೊಡನೆ ವ್ಯಾಜ್ಯವಾಡಿದರೂ ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು.


ನ್ಯಾಯವಿಚಾರಿಸುವಾಗ ಮುಖದಾಕ್ಷಿಣ್ಯಮಾಡದೆ ಅಧಿಕರನ್ನೂ ಅಲ್ಪರನ್ನೂ ಸಮನಾಗಿ ತಿಳಿಯಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು ಎಂದು ಹೇಳಿದೆನು.


ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲ್ಯರಿಗೂ ಅಮ್ಮೋನಿಯರಿಗೂ ಮಧ್ಯದಲ್ಲಿ ನ್ಯಾಯತೀರಿಸಲಿ ಎಂದು ಹೇಳಿಸಿದನು.


ಹೀಗಿರುವಲ್ಲಿ ನಿಮಗೆ ಯೆಹೋವನ ಭಯವು ಇರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ ಮುಖದಾಕ್ಷಿಣ್ಯವೂ ಲಂಚತಿನ್ನುವದೂ ಇಲ್ಲವಾದದರಿಂದ ಜಾಗರೂಕತೆಯಿಂದ ಕೆಲಸಮಾಡಿರಿ ಎಂದು ಎಚ್ಚರಿಸಿದನು.


ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ಧರ್ಮಸ್ವರೂಪನೇ; ನೀನು ಸತ್ಯವನ್ನೇ ನಡಿಸಿದಿ, ನಾವಾದರೋ ದುಷ್ಟರು.


ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡಾನೆಂಬ ಯೋಚನೆಯೂ ಸರ್ವಶಕ್ತನು ಅನ್ಯಾಯವನ್ನು ನಡಿಸಾನೆಂಬ ಭಾವನೆಯೂ ದೂರವಾಗಿರಲಿ!


ಆಗ ನಾನು ಮನಸ್ಸಿನಲ್ಲಿ - ದೇವರು ಧರ್ಮಿಗಳಿಗೂ ಅಧರ್ಮಿಗಳಿಗೂ ನ್ಯಾಯತೀರಿಸುವನು.; ಆತನ ನ್ಯಾಯಕ್ರಮದಲ್ಲಿ ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯವುಂಟಲ್ಲವೆ ಅಂದುಕೊಂಡೆನು.


ಹೃದಯವನ್ನೂ ಅಂತರಿಂದ್ರಿಯವನ್ನೂ ಪರೀಕ್ಷಿಸಿ ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆ ಮಾಡಿದ್ದೇನಷ್ಟೆ.


ಆದರೆ ನೀವು - ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸಮವಲ್ಲವೋ? ನಿಮ್ಮ ಕ್ರಮವೇ ಸಮವಲ್ಲವಷ್ಟೆ.


ಅವರು ಅಡ್ಡಬಿದ್ದು - ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ,


ಹೊಲಗಳೂ ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿಮಾಡಲಿ.


ಹೌದು, ದೇವರು ಕೆಟ್ಟದ್ದನ್ನು ನಡಿಸುವದೇ ಇಲ್ಲ, ಸರ್ವಶಕ್ತನು ನೀತಿಯನ್ನು ಡೊಂಕು ಮಾಡುವದೇ ಇಲ್ಲ.


ದೋಷಿಯು ಮನಸ್ಸನ್ನು ಬೇರೆಮಾಡಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬೊಗ್ಗಿಸಿ ಸಿದ್ಧಮಾಡಿದ್ದಾನೆ.


ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ.


ಎಲ್ಲಾ ನಿವಾಸಿಗಳೊಡನೆ ಭೂವಿುಯು ಕರಗಿಹೋದರೂ ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ [ಎಂಬದು]. ಸೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು