Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:4 - ಕನ್ನಡ ಸತ್ಯವೇದವು J.V. (BSI)

4 ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರವಿುಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀರು ತರಿಸಿಕೊಡುತ್ತೇನೆ, ಕಾಲುತೊಳೆದುಕೊಂಡು ಈ ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಲು ನೀರನ್ನು ತಂದುಕೊಡುವೆನು. ನೀವು ಮರದ ಕೆಳಗೆ ವಿಶ್ರಾಂತಿ ತೆಗೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ, ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ, ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:4
9 ತಿಳಿವುಗಳ ಹೋಲಿಕೆ  

ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಸೇರಿಸಿ ಕಾಲುಗಳನ್ನು ತೊಳೆಯುವದಕ್ಕೆ ನೀರನ್ನು ಕೊಡಿಸಿ ಅವರ ಕತ್ತೆಗಳಿಗೆ ಮೇವು ಹಾಕಿಸಿದನು.


ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡಿದ್ದವರ ಕಾಲುಗಳನ್ನು ತೊಳೆಯುವದಕ್ಕೆ ನೀರನ್ನು ತರಿಸಿದನು.


ಸ್ವಾವಿುಗಳೇ, ನಿಮ್ಮ ದಾಸನ ಮನೆಗೆ ಬಂದು ಇಳುಕೊಂಡು ಕಾಲುಗಳನ್ನು ತೊಳಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡುಕೊಂಡು ಹೋಗಬಹುದು ಅಂದನು. ಅವರು - ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ,


ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ - ಈ ಹೆಂಗಸನ್ನು ನೋಡಿದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ತ್ಯಾವಮಾಡಿ ತನ್ನ ತಲೆಯಕೂದಲಿನಿಂದ ಒರಸಿದಳು.


ಆಕೆ ಎದ್ದು ನಮಸ್ಕಾರಮಾಡಿ ಮಾತಾಡಿಸಿದವನಿಗೆ - ನಿನ್ನ ದಾಸಿಯಾದ ನಾನು ನನ್ನ ಸ್ವಾವಿುಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವದಕ್ಕೆ ಸಿದ್ಧಳಾಗಿದ್ದೇನೆ ಎಂದು ಉತ್ತರಕೊಟ್ಟು


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿರಬೇಕು; ಅಂದರೆ ಮಕ್ಕಳನ್ನು ಸಾಕಿದವಳಾಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ದೇವಜನರಿಗೆ ಉಪಚಾರಮಾಡಿದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಲಿ ಆಗಿರಬೇಕು.


ಬೊಗ್ಗಿ ನಮಸ್ಕರಿಸಿ - ಸ್ವಾವಿು, ದಯವಿರಲಿ; ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.


ಈ ಬೀದಿಯಲ್ಲಿ ರಾತ್ರಿ ಕಳೆಯಬೇಡ, ನನ್ನ ಮನೆಗೆ ಬಾ ಎಂದು ಹೇಳಿ ಅವನನ್ನು ಕರಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು