Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:5 - ಕನ್ನಡ ಸತ್ಯವೇದವು J.V. (BSI)

5 ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಬೆಳಿಸಬಹುದು ಎನ್ನಲು ಅವರು - ನೀನು ಹೇಳಿದಂತೆ ಮಾಡಬಹುದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು. ದಾಸನಿರುವ ಸ್ಥಳದ ಹತ್ತಿರ ಹಾದುಹೋಗುತ್ತಿದ್ದೀರಲ್ಲವೇ?” ಎನ್ನಲು ಅವರು “ನೀನು ಹೇಳಿದಂತೆಯೇ ಆಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ಆ ಮೂವರು ಪುರುಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ಸ್ವಲ್ಪ ಆಹಾರವನ್ನು ತರುತ್ತೇನೆ. ತರುವಾಯ ನೀವು ಮುಂದೆ ಹೊರಟು ಹೋಗಬಹುದು. ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ನೀನು ಹೇಳಿದಂತೆಯೇ ಮಾಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:5
12 ತಿಳಿವುಗಳ ಹೋಲಿಕೆ  

ಮತ್ತು ಮಾನೋಹನು ಯೆಹೋವನ ದೂತನನ್ನು - ನಾವು ನಿನಗೋಸ್ಕರ ಒಂದು ಹೋತಮರಿಯನ್ನು ಪಕ್ವಮಾಡಿ ತರುವವರೆಗೂ ದಯವಿಟ್ಟು ಇಲ್ಲೇ ನಿಲ್ಲಬೇಕೆಂದು ಬೇಡಿಕೊಳ್ಳಲು


ಹೃದಯಾನಂದಕರವಾದ ದ್ರಾಕ್ಷಾರಸವನ್ನೂ ಮುಖಕ್ಕೆ ಕಾಂತಿಯನ್ನುಂಟುಮಾಡುವ ಎಣ್ಣೆಯನ್ನೂ ಪ್ರಾಣಾಧಾರವಾದ ರೊಟ್ಟಿಯನ್ನೂ ಸಂಪಾದಿಸಿಕೊಳ್ಳುತ್ತಾರೆ.


ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ - ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು ಎಂದು ಹೇಳಲು


ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವವರೆಗೆ ತಾವು ಈ ಸ್ಥಳವನ್ನು ಬಿಡಬಾರದು ಎಂದು ಬಿನ್ನವಿಸಲು ಆತನು - ನೀನು ತಿರಿಗಿ ಬರುವವರೆಗೆ ನಾನು ಇಲ್ಲೇ ಇರುವೆನು ಅಂದನು.


ಯಾಕೋಬನು - ಹಾಗೆ ಅಪ್ಪಣೆಕೊಡಕೂಡದು; ನೀನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ.


ನನಗೆ ಪುರುಷರನ್ನರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸೇನು; ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು ಎಂದು ಹೇಳಲು ಅವರು -


ಇಗೋ, ಕರ್ತನೂ ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಜೀವನಕ್ಕೆ ಆಧಾರಕೋದ್ಧಾರಕವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇವಿುನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.


ನಮ್ಮ ಅನುದಿನದ ಆಹಾರವನ್ನು ಈ ಹೊತ್ತೂ ದಯಪಾಲಿಸು.


ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ - ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು ಎಂದು ಹೇಳಿದನು.


ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ಪಕ್ವಮಾಡಿ ಒಂದು ಏಫಾ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಮಾಂಸವನ್ನು ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.


ಅವನು - ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವದಿಲ್ಲ; ಯಜ್ಞಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸಮರ್ಪಿಸು ಅಂದನು. ಅವನು ಯೆಹೋವನ ದೂತನೆಂಬದು ಮಾನೋಹನಿಗೆ ಗೊತ್ತಿದ್ದಿಲ್ಲ.


ಆಕೆಯು ಹೋಗುತ್ತಿರುವಾಗ ತಿರಿಗಿ ಆಕೆಯನ್ನು ಕರೆದು - ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು