Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:7 - ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. ಆಳು ಬೇಗನೆ ಅಡಿಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ದನಗಳ ಹಟ್ಟಿಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. ಆಳು ಬೇಗನೆ ಅಡಿಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಳಿಕ ಅವನು ತನ್ನ ಪಶುಗಳಿದ್ದಲ್ಲಿಗೆ ಓಡಿಹೋಗಿ ಉತ್ತಮವಾದ ಎಳೆಕರುವನ್ನು ತೆಗೆದು ಸೇವಕನಿಗೆ ಕೊಟ್ಟು, “ಬೇಗನೇ ಕರುವನ್ನು ಕೊಯ್ದು, ಊಟಕ್ಕೆ ಸಿದ್ಧಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಬ್ರಹಾಮನು ದನದ ಮಂದೆಯ ಬಳಿಗೆ ಓಡಿಹೋಗಿ, ಒಳ್ಳೆಯ ಕರುವನ್ನು ತೆಗೆದುಕೊಂಡು ಒಬ್ಬ ಸೇವಕನಿಗೆ ಕೊಟ್ಟನು. ಆ ಸೇವಕನು ಬೇಗನೆ ಅಡಿಗೆಯನ್ನು ಸಿದ್ಧಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:7
11 ತಿಳಿವುಗಳ ಹೋಲಿಕೆ  

ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಅವನಿಗೆ ಕೊಯ್ಸಿದಿ ಎಂದು ಉತ್ತರಕೊಟ್ಟನು.


ಆಳು ಅವನಿಗೆ - ನಿನ್ನ ತಮ್ಮ ಬಂದಿದ್ದಾನೆ; ಇವನು ಸುರಕ್ಷಿತವಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿಸಿದ ಕರುವನ್ನು ಕೊಯ್ಸಿದ್ದಾನೆ ಎಂದು ಹೇಳಿದನು.


ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಉಲ್ಲಾಸ ಪಡೋಣ.


ತಿರಿಗಿ ಬೇರೆ ಆಳುಗಳನ್ನು ಕರೆದು - ನೀವು ಊಟಕ್ಕೆ ಹೇಳಿಸಿಕೊಂಡವರ ಬಳಿಗೆ ಹೋಗಿ - ಇಗೋ, ಅಡಿಗೆ ಸಿದ್ಧವಾಗಿದೆ; ನನ್ನ ಹೋರಿಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಯಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಊಟಕ್ಕೆ ಬನ್ನಿರೆಂಬದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.


ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿ ಗಂಡುಪಶುವಿದ್ದರೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಗಲಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಈಡಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ದಂತದ ಮಂಚಗಳ ಮೇಲೆ ಮಲಗುತ್ತಾರೆ, ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ; ಹಿಂಡಿನ ಮರಿಗಳನ್ನೂ ಕೊಟ್ಟಿಗೆಯ ಕರುಗಳನ್ನೂ ತಿನ್ನುತ್ತಾರೆ;


ಅನ್ನಲು ಅವನು ಅವರನ್ನು ಬಹಳ ಬಲವಂತಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳುಕೊಳ್ಳುವದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.


ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ - ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು ಎಂದು ಹೇಳಿದನು.


ತರುವಾಯ ಅಬ್ರಹಾಮನು ಹಾಲುಮೊಸರನ್ನೂ ಅಟ್ಟ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಊಟಮಾಡುವವರೆಗೂ ಅವನು ಹತ್ತಿರ ನಿಂತುಕೊಂಡು ಉಪಚಾರ ಮಾಡಿದನು.


ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು ಪಕ್ವಮಾಡಿ ಹಿಟ್ಟನ್ನು ತೆಗೆದುಕೊಂಡು ನಾದಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು