Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:9 - ಕನ್ನಡ ಸತ್ಯವೇದವು J.V. (BSI)

9 ಬಳಿಕ ಅವರು ಅವನನ್ನು - ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ ಎಂದು ಕೇಳಲು ಅವನು - ಅಗೋ, ಗುಡಾರದಲ್ಲಿದ್ದಾಳೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಳಿಕ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಆ ಅತಿಥಿಗಳು ವಿಚಾರಿಸಿದಾಗ, “ಅಲ್ಲಿ ಗುಡಾರದಲ್ಲಿದ್ದಾಳೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಪುರುಷರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ ಸಾರಳು ಎಲ್ಲಿ?” ಎಂದು ಕೇಳಿದರು. ಅಬ್ರಹಾಮನು ಅವರಿಗೆ, “ಆಕೆ ಗುಡಾರದಲ್ಲಿ ಇದ್ದಾಳೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಕೇಳಲು, ಅವನು, “ಇಗೋ, ಡೇರೆಯಲ್ಲಿದ್ದಾಳೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:9
8 ತಿಳಿವುಗಳ ಹೋಲಿಕೆ  

ಮನೆಯಲ್ಲೇ ಕೆಲಸಮಾಡುವವರೂ ಸುಶೀಲೆಯರೂ ನಿಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ಬುದ್ಧಿ ಕಲಿಸುವ ಹಾಗೆ ಬೋಧಿಸು.


ಇಸಾಕನು ಆಕೆಯನ್ನು ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಈ ರೀತಿಯಾಗಿ ಅವನು ರೆಬೆಕ್ಕಳನ್ನು ವರಿಸಿದನು. ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸತ್ತ ದುಃಖವನ್ನು ಶಮನ ಮಾಡಿಕೊಂಡನು.


ಲಾಬಾನನು ಯಾಕೋಬನ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.


ಯೆಹೋವನು ಕಾಯಿನನನ್ನು - ನಿನ್ನ ತಮ್ಮನಾದ ಹೇಬೆಲನು ಎಲ್ಲಿ ಎಂದು ಕೇಳಲು ಅವನು - ನಾನರಿಯೆ; ನನ್ನ ತಮ್ಮನನ್ನು ಕಾಯುವವನು ನಾನೋ ಎಂದು ಉತ್ತರಕೊಟ್ಟನು.


ನಂಬಿಕೆಯಿಂದಲೇ ಅವನು ವಾಗ್ದಾತ್ತದೇಶಕ್ಕೆ ಬಂದಾಗ ಅಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಡೇರೆಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ಯೆಹೋವದೇವರು ಮನುಷ್ಯನನ್ನು -


ತರುವಾಯ ಅಬ್ರಹಾಮನು ಹಾಲುಮೊಸರನ್ನೂ ಅಟ್ಟ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಊಟಮಾಡುವವರೆಗೂ ಅವನು ಹತ್ತಿರ ನಿಂತುಕೊಂಡು ಉಪಚಾರ ಮಾಡಿದನು.


ಅದಕ್ಕಾತನು - ಬರುವ ವರುಷದ ಇದೇ ಕಾಲದಲ್ಲಿ ನಾನು ತಪ್ಪದೆ ತಿರಿಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು ಅಂದನು. ಆ ಮಾತು ಹಿಂದೆ ಗುಡಾರದ ಬಾಗಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು