Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:11 - ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಇವರು ಬಾಗಿಲು ಯಾವದೆಂದು ತಿಳಿಯದೆ ಬೇಸರಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೊಡ್ಡವರು ಚಿಕ್ಕವರು ಎನ್ನದೆ, ಹೊರಗಿದ್ದ ಆ ಜನರೆಲ್ಲರ ಕಣ್ಣು ಕುರುಡಾಗುವಂತೆ ಮಾಡಿದರು; ಬಾಗಿಲು ಯಾವುದೆಂದು ತಿಳಿಯದೆ ಅವರು ತಡಕಾಡುವಂತೆ ಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಇಬ್ಬರು ಪುರುಷರು ಮನೆಯ ಹೊರಗೆ ಇದ್ದ ಗಂಡಸರನ್ನೆಲ್ಲಾ ಕುರುಡರಾಗುವಂತೆ ಮಾಡಿದ್ದರಿಂದ ಅವರು ಬಾಗಿಲನ್ನು ಗುರುತಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಬಾಗಿಲಲ್ಲಿದ್ದವರನ್ನು ಕಿರಿಯರಿಂದ ಹಿರಿಯರವರೆಗೆ ಕುರುಡಾಗುವಂತೆ ಮಾಡಿದರು. ಆಗ ಆ ಊರಿನವರು ಬಾಗಿಲನ್ನು ಕಂಡುಕೊಳ್ಳದೆ ಬೇಸರಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:11
7 ತಿಳಿವುಗಳ ಹೋಲಿಕೆ  

ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು - ಸ್ವಾಮೀ, ಈ ಜನರನ್ನು ಕುರುಡರನ್ನಾಗಿಮಾಡು ಎಂದು ಯೆಹೋವನನ್ನು ಪ್ರಾರ್ಥಿಸಿದನು. ಆತನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.


ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈಹಿಡಿಯುವವರನ್ನು ಹುಡುಕುತ್ತಾ ತಿರುಗಾಡಿದನು.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಅತ್ತಿತ್ತ ಹೋಗುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ; ಹೊಸ ಬಲವನ್ನು ತಂದುಕೊಂಡಿ; ಆದದರಿಂದ ನೀನು ಸೋತುಹೋಗಲಿಲ್ಲ.


ಪಟ್ಟಣದ ದಾರಿ ತಿಳಿಯದವನಿಗೆ ಮೂಢರು [ತಿಳಿಸಲು] ಪಡುವ ಪ್ರಯಾಸದಿಂದ ಆಯಾಸವೇ.


ಆಗ ಆ ದೂತರು ಲೋಟನಿಗೆ - ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಬೇರೆ ಎಲ್ಲರನ್ನೂ ಊರಹೊರಕ್ಕೆ ಕರೆದುಕೊಂಡು ಬಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು