ಆದಿಕಾಂಡ 19:12 - ಕನ್ನಡ ಸತ್ಯವೇದವು J.V. (BSI)12 ಆಗ ಆ ದೂತರು ಲೋಟನಿಗೆ - ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಬೇರೆ ಎಲ್ಲರನ್ನೂ ಊರಹೊರಕ್ಕೆ ಕರೆದುಕೊಂಡು ಬಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಳಿಕ ಆ ಮನುಷ್ಯರಿಬ್ಬರು ಲೋಟನಿಗೆ, “ನಿನಗೆ ಇಲ್ಲಿ ಯಾರು ಯಾರು ಇದ್ದಾರೆಯೋ, ಗಂಡುಹೆಣ್ಣು ಮಕ್ಕಳು, ಅಳಿಯಂದಿರು ಹಾಗೂ ಪಟ್ಟಣದಲ್ಲಿ ನಿನಗಿರುವ ಬೇರೆ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ಇಬ್ಬರು ಪುರುಷರು ಲೋಟನಿಗೆ, “ನಿನ್ನ ಕುಟುಂಬದ ಬೇರೆ ಯಾರಾದರೂ ಈ ನಗರದಲ್ಲಿ ಇದ್ದಾರೆಯೇ? ನಿನಗೆ ಅಳಿಯಂದಿರಾಗಲಿ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇಲ್ಲಿ ವಾಸವಾಗಿದ್ದಾರೆಯೇ? ನಿನ್ನ ಕುಟುಂಬದ ಯಾರಾದರೂ ಈ ನಗರದಲ್ಲಿದ್ದರೆ ಈಗಲೇ ಇಲ್ಲಿಂದ ಹೊರಡುವಂತೆ ಅವರಿಗೆ ತಿಳಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆ ದೂತರಿಬ್ಬರು ಲೋಟನಿಗೆ, “ಇಲ್ಲಿ ನಿನಗೆ ಇನ್ನೂ ಯಾರಾದರೂ ಇದ್ದಾರೋ? ನಿನ್ನ ಅಳಿಯಂದಿರನ್ನೂ, ನಿನ್ನ ಪುತ್ರರನ್ನೂ, ಪುತ್ರಿಯರನ್ನೂ, ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಈ ಸ್ಥಳದಿಂದ ಹೊರಗೆ ಕರೆದುಕೊಂಡು ಬಾ. ಅಧ್ಯಾಯವನ್ನು ನೋಡಿ |