ಆದಿಕಾಂಡ 19:16 - ಕನ್ನಡ ಸತ್ಯವೇದವು J.V. (BSI)16 ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಹೊರಗೆ ತಂದ ಮೇಲೆ ಆತನು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವನು ಇನ್ನೂ ತಡಮಾಡುತ್ತಿರುವುದನ್ನು ಕಂಡು, ಆ ಮನುಷ್ಯರು ಅವನನ್ನು ಹಾಗು ಅವನ ಹೆಂಡತಿ ಮಕ್ಕಳನ್ನು ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಸರ್ವೇಶ್ವರ ಸ್ವಾಮಿಗೆ ಅವನ ಮೇಲೆ ಅಷ್ಟು ಕನಿಕರವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಲೋಟನು ಗಲಿಬಿಲಿಗೊಂಡು ತಡಮಾಡಲು ಆ ಇಬ್ಬರು ಪುರುಷರು ಲೋಟನನ್ನೂ ಅವನ ಹೆಂಡತಿಯನ್ನೂ ಅವನ ಇಬ್ಬರು ಹೆಣ್ಣುಮಕ್ಕಳನ್ನೂ ಕೈಹಿಡಿದುಕೊಂಡು ನಗರದ ಹೊರಕ್ಕೆ ಸುರಕ್ಷಿತವಾಗಿ ತಂದುಬಿಟ್ಟರು. ಹೀಗೆ ಯೆಹೋವನು ಲೋಟನಿಗೂ ಅವನ ಕುಟುಂಬದವರಿಗೂ ದಯೆತೋರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರು ತಡಮಾಡಿದಾಗ ಯೆಹೋವ ದೇವರು ಅವನನ್ನು ಕನಿಕರಿಸಿದ್ದರಿಂದ, ಆ ದೂತರು ಅವನ ಕೈಯನ್ನೂ, ಅವನ ಹೆಂಡತಿಯ ಕೈಯನ್ನೂ, ಅವನ ಇಬ್ಬರು ಪುತ್ರಿಯರ ಕೈಗಳನ್ನೂ ಹಿಡಿದು, ಅವರನ್ನು ಪಟ್ಟಣದ ಹೊರಗೆ ತಂದುಬಿಟ್ಟರು. ಅಧ್ಯಾಯವನ್ನು ನೋಡಿ |