ಆದಿಕಾಂಡ 19:17 - ಕನ್ನಡ ಸತ್ಯವೇದವು J.V. (BSI)17 ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಊರ ಹೊರಗೆ ಬಿಟ್ಟಾದ ಮೇಲೆ ಆ ಇಬ್ಬರಲ್ಲಿ ಒಬ್ಬನು, “ಪ್ರಾಣ ಉಳಿಸಿಕೊಳ್ಳಬೇಕಾದರೆ ಓಡಬೇಕು, ಹಿಂದಕ್ಕೆ ನೋಡಬಾರದು; ಬಯಲುಸೀಮೆಯಲ್ಲೂ ನಿಲ್ಲದೆ ಗುಡ್ಡಗಾಡಿಗೆ ಓಡಬೇಕು, ಇಲ್ಲವಾದರೆ ನಾಶವಾದೀತು!” ಎಂದು ಎಚ್ಚರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವರು ನಗರದ ಹೊರಕ್ಕೆ ಬಂದ ಮೇಲೆ ಆ ಪುರುಷರಲ್ಲಿ ಒಬ್ಬನು, “ಈಗ ಓಡಿಹೋಗಿ ನಿಮ್ಮ ಪ್ರಾಣವನ್ನು ಕಾಪಾಡಿಕೊಳ್ಳಿ; ನಗರದ ಕಡೆಗೆ ತಿರುಗಿ ನೋಡಬೇಡಿ; ಕಣಿವೆಯ ಯಾವ ಸ್ಥಳದಲ್ಲೂ ನಿಂತುಕೊಳ್ಳಬೇಡಿ; ತಪ್ಪಿಸಿಕೊಂಡು ಬೆಟ್ಟಗಳಿಗೆ ಓಡಿಹೋಗಿರಿ; ಇಲ್ಲವಾದರೆ, ಈ ನಗರದೊಡನೆ ನೀವೂ ನಾಶವಾಗುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರನ್ನು ಹೊರಗೆ ತಂದಮೇಲೆ ಅವರಲ್ಲಿ ಒಬ್ಬನು, “ಹಿಂದಕ್ಕೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ. ನೀನು ನಾಶವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗು,” ಎಂದನು. ಅಧ್ಯಾಯವನ್ನು ನೋಡಿ |