Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:20 - ಕನ್ನಡ ಸತ್ಯವೇದವು J.V. (BSI)

20 ಅಗೋ, ಅಲ್ಲಿ ಒಂದು ಊರು ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವದು; ಆ ಊರು ಸಣ್ಣದಲ್ಲವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದುದರಿಂದ ಅಗೋ, ಅಲ್ಲಿ ಊರೊಂದು ಕಾಣಿಸುತ್ತಿದೆ; ಅದು ಅಷ್ಟೇನು ದೂರವಲ್ಲ, ಚಿಕ್ಕ ಊರು, ಹೌದಲ್ಲವೆ? ಅಲ್ಲಿಗಾದರೂ ಹೋಗಲು ಅಪ್ಪಣೆಯಾದರೆ ಪ್ರಾಣ ಉಳಿಯುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಗೋ, ಅಲ್ಲಿ ಒಂದು ಚಿಕ್ಕ ಊರಿದೆ. ಆ ಊರಿಗೆ ಓಡಿಹೋಗಲು ನನಗೆ ಅಪ್ಪಣೆಕೊಡಿ. ನಾನು ಅಲ್ಲಿಗೆ ಓಡಿಹೋಗಿ ಸುರಕ್ಷಿತವಾಗಿರುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ಪಟ್ಟಣವನ್ನು ನೋಡಿರಿ. ನಾನು ಅಲ್ಲಿಗೆ ಓಡಿಹೋಗಲು ಸಮೀಪವಾಗಿದೆ ಮತ್ತು ಅದು ಸಣ್ಣದು. ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುತ್ತೇನೆ. ಇದರಿಂದ ನನ್ನ ಪ್ರಾಣವು ಉಳಿಯುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:20
9 ತಿಳಿವುಗಳ ಹೋಲಿಕೆ  

ನನ್ನ ಪ್ರಾಣವನ್ನು ಉಳಿಸು; ಅದು ನಿನ್ನನ್ನು ಕೊಂಡಾಡಲಿ. ನಿನ್ನ ವಿಧಿಗಳಿಂದ ನನಗೆ ಸಹಾಯವಾಗಲಿ.


ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಲೋಟನು ಚೋಗರಿನಲ್ಲಿರುವದಕ್ಕೆ ಅಂಜಿ ತನ್ನಿಬ್ಬರು ಹೆಣ್ಣು ಮಕ್ಕಳನ್ನು ಕರಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಿಸಿದರು.


ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿವಿುತ್ತ ನನಗೆ ಹಿತವಾಗುವದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು ಎಂದು ಹೇಳಿದನು.


ನೀನು ನಿನ್ನ ದಾಸನ ಮೇಲೆ ದಯವಿಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿಹೋಗಲಾರೆನು: ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.


ಅದಕ್ಕಾತನು - ಈ ವಿಷಯದಲ್ಲಿಯೂ ನಿನಗೆ ಅನುಗ್ರಹಮಾಡಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡಹುವದಿಲ್ಲ.


ಯೆರೆಮೀಯನು - ನಿನ್ನನ್ನು ಒಪ್ಪಿಸರು; ಜೀಯಾ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಕೊಳ್ಳು; ಕೈಕೊಂಡರೆ ಪ್ರಾಣವುಳಿಯುವದು, ಸುಖವೂ ಆಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು