Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:21 - ಕನ್ನಡ ಸತ್ಯವೇದವು J.V. (BSI)

21 ಅದಕ್ಕಾತನು - ಈ ವಿಷಯದಲ್ಲಿಯೂ ನಿನಗೆ ಅನುಗ್ರಹಮಾಡಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡಹುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕಾತನು, “ಸರಿ, ಹಾಗೆಯೇ ಆಗಲಿ, ಈ ನಿನ್ನ ಕೋರಿಕೆಯನ್ನೂ ನೆರವೇರಿಸುತ್ತೇನೆ, ನೀನು ಹೇಳಿದ ಆ ಊರನ್ನು ಹಾಳುಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಪುರುಷನು ಲೋಟನಿಗೆ, “ಆಗಲಿ, ನಿನಗೆ ಅಪ್ಪಣೆ ಕೊಟ್ಟಿದ್ದೇನೆ. ನಾನು ಆ ಊರನ್ನು ನಾಶಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೂತನು ಅವನಿಗೆ, “ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ. ನೋಡು, ನೀನು ಹೇಳಿದ ಆ ಊರನ್ನು ನಾನು ಕೆಡವಿ ಹಾಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:21
16 ತಿಳಿವುಗಳ ಹೋಲಿಕೆ  

ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ; ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.


ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.


ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.


ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು.


ಆದರೆ ಸ್ನೇಹದ ನಿವಿುತ್ತವಾಗಿ ಎದ್ದು ಕೊಡದೆ ಇದ್ದರೂ ಅವನ ಕಾಟದ ದೆಸೆಯಿಂದ ಎದ್ದು ಬಂದು ಕೇಳಿದಷ್ಟು ಅವನಿಗೆ ಕೊಡುವನೆಂದು ನಿಮಗೆ ಹೇಳುತ್ತೇನೆ.


ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ನ್ಯಾಯವನ್ನು ದಿಗ್ವಿಜಯಕ್ಕಾಗಿ ಕಳುಹಿಸಿಕೊಡುವನು.


ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಒಳ್ಳೇ ಕೆಲಸ ಮಾಡಿದರೆ ನಿನ್ನ ತಲೆ ಎತ್ತಲ್ಪಡುವದಲ್ಲವೇ; ಅಲ್ಲದಿದ್ದರೆ ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವದು; ಆದರೂ ನೀನು ಅದನ್ನು ವಶಮಾಡಿಕೊಳ್ಳಬೇಕು ಎಂದು ಹೇಳಿದನು.


ಯೆಹೋವನು ಈ ಜನರನ್ನು ಕುರಿತು - ಇವರು [ನನ್ನನ್ನು ಪ್ರಯಾಣಿಕನು ಎಂದ] ಹಾಗೆಯೇ ಅಲೆಯುವದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ; ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು ಎಂದು ಹೇಳಿದ್ದಾನೆ.


ಅಗೋ, ಅಲ್ಲಿ ಒಂದು ಊರು ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವದು; ಆ ಊರು ಸಣ್ಣದಲ್ಲವೇ ಅಂದನು.


ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಅಲ್ಲಿಗೆ ಮುಟ್ಟುವ ತನಕ ನಾನೇನೂ ಮಾಡುವದಕ್ಕಾಗುವದಿಲ್ಲ ಅಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.


ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ - ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ ಅಂದನು.


ಯೆಹೋವನು ಮೋಶೆಗೆ - ನಿನಗೆ ನನ್ನ ಅನುಗ್ರಹ ದೊರಕಿದ್ದರಿಂದಲೂ ನಾನು ನಿನ್ನ ಹೆಸರನ್ನು ಗೊತ್ತುಮಾಡಿದ್ದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು