Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:29 - ಕನ್ನಡ ಸತ್ಯವೇದವು J.V. (BSI)

29 ದೇವರು ಆ ಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನು ಕೆಡವಿದರೂ ಅಬ್ರಹಾಮನನ್ನು ನೆನಸಿ ಲೋಟನನ್ನು ತಪ್ಪಿಸಿ ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನೇನೋ ಹಾಳುಮಾಡಿದರು, ಆದರೆ ಅಬ್ರಹಾಮನನ್ನು ನೆನಪಿಗೆ ತಂದುಕೊಂಡು ಲೋಟನನ್ನು ತಪ್ಪಿಸಿ ಕಾಪಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ, ಲೋಟನು ವಾಸವಾಗಿದ್ದ ಪಟ್ಟಣಗಳನ್ನು ನಾಶಮಾಡಿದರು. ಆದರೆ ಅಬ್ರಹಾಮನನ್ನು ಜ್ಞಾಪಕಮಾಡಿಕೊಂಡು, ಲೋಟನನ್ನು ಹೊರಗೆ ಕಳುಹಿಸಿ ಪಾರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:29
21 ತಿಳಿವುಗಳ ಹೋಲಿಕೆ  

ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.


ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ದ್ರೋಹಗಳನ್ನೂ ಮನಸ್ಸಿನಲ್ಲಿಡದೆ ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಸು.


ಆದರೆ ಆ ಅಧರ್ಮಿಗಳ ನಾಚಿಕೆಗೆಟ್ಟ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.


ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ; ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.


ನಾವು ದೀನಾವಸ್ಥೆಯಲ್ಲಿದ್ದಾಗ ನಮ್ಮನ್ನು ನೆನಪುಮಾಡಿಕೊಂಡನು; ಆತನ ಕೃಪೆಯು ಶಾಶ್ವತವಾದದ್ದು.


ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,


ಹೀಗೆ ಆತನು ತನ್ನ ಪರಿಶುದ್ಧವಚನವನ್ನೂ ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು


ಆಮೇಲೆ ನಾನು ಲೇವಿಯರಿಗೆ - ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಲುಗಳನ್ನು ಕಾಯಬೇಕು ಎಂದು ಆಜ್ಞಾಪಿಸಿದೆನು. ನನ್ನ ದೇವರೇ ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿನ್ನ ಮಹಾಕೃಪೆಗನುಸಾರವಾಗಿ ನನ್ನನ್ನು ಕನಿಕರಿಸು.


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು [ನಿನ್ನ ಪುಸ್ತಕದಿಂದ] ಅಳಿಸಿಬಿಡಬೇಡ.


ಆಮೇಲೆ ದೇವರು ರಾಹೇಲಳನ್ನು ನೆನಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.


ತೆರಹನ ವಂಶದವರ ಚರಿತ್ರೆ. ತೆರಹನು ಅಬ್ರಾಮ ನಾಹೋರ ಹಾರಾನರನ್ನು ಪಡೆದನು.


ಯೆಹೋವನು ನಿಮ್ಮನ್ನು ಪ್ರೀತಿಸಿ ತಾನು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿ ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.


ಇವರ ಮೊಂಡತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಾಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ.


ಈ ಮೂವರು ಪುರುಷರು ಅದರಲ್ಲಿದ್ದರೂ ನನ್ನ ಜೀವದಾಣೆ ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವದು; ಇದು ಕರ್ತನಾದ ಯೆಹೋವನ ನುಡಿ.


ನಿನ್ನ ಕೆಟ್ಟತನದಿಂದ ನಿನ್ನಂಥವನಿಗೇ [ನಷ್ಟವಾದೀತು], ನಿನ್ನ ನೀತಿಯಿಂದ ನರಜನ್ಮದವನಿಗೇ [ಲಾಭ ಸಿಕ್ಕೀತು].


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು