Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:3 - ಕನ್ನಡ ಸತ್ಯವೇದವು J.V. (BSI)

3 ಅನ್ನಲು ಅವನು ಅವರನ್ನು ಬಹಳ ಬಲವಂತಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳುಕೊಳ್ಳುವದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು, “ಇಲ್ಲ, ನಾವು ಬೀದಿಯಲ್ಲೇ ರಾತ್ರಿಯನ್ನು ಕಳೆಯುತ್ತೇವೆ,” ಎಂದು ಉತ್ತರಿಸಿದರು. ಅವನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅವನ ಮನೆಯಲ್ಲೇ ತಂಗಲು ಒಪ್ಪಿಕೊಂಡರು. ಅವರು ಮನೆಗೆ ಬಂದಾಗ ಲೋಟನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಸಿದ್ಧಗೊಳಿಸಿದನು; ಅವರು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಲೋಟನು ತನ್ನ ಮನೆಗೆ ಬರುವಂತೆ ಒತ್ತಾಯಿಸಿದ್ದರಿಂದ ಅವರು ಅವನ ಮನೆಗೆ ಹೋದರು. ಲೋಟನು ಅವರಿಗಾಗಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಅಡಿಗೆ ಮಾಡಿಸಿದನು. ದೇವದೂತರು ಅದನ್ನು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ, ಅವರು ತಿರುಗಿಬಂದು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣ ಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿದನು. ಅವರು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:3
18 ತಿಳಿವುಗಳ ಹೋಲಿಕೆ  

ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು ಪಕ್ವಮಾಡಿ ಹಿಟ್ಟನ್ನು ತೆಗೆದುಕೊಂಡು ನಾದಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.


ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ಪಕ್ವಮಾಡಿ ಒಂದು ಏಫಾ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಮಾಂಸವನ್ನು ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.


ಅತಿಥಿಸತ್ಕಾರಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.


ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿದ್ದಿಲ್ಲ, ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಿಪಡಿಸಿಕೊಂಡಿರಲಿಲ್ಲ.


ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು.


ಯೇಸುವಿಗೆ ಅಲ್ಲಿ ಔತಣಮಾಡಿಸಲು ಮಾರ್ಥಳು ನೆರವಾಗಿದ್ದಳು; ಲಾಜರನು ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು.


ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದು - ನೀನು ಹಾದಿಗಳಿಗೂ ಬೇಲಿಗಳ ಬಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರಕೊಂಡು ಬಾ, ನನ್ನ ಮನೆ ತುಂಬಲಿ.


ಆದರೆ ಸ್ನೇಹದ ನಿವಿುತ್ತವಾಗಿ ಎದ್ದು ಕೊಡದೆ ಇದ್ದರೂ ಅವನ ಕಾಟದ ದೆಸೆಯಿಂದ ಎದ್ದು ಬಂದು ಕೇಳಿದಷ್ಟು ಅವನಿಗೆ ಕೊಡುವನೆಂದು ನಿಮಗೆ ಹೇಳುತ್ತೇನೆ.


ತರುವಾಯ ಲೇವಿಯು ತನ್ನ ಮನೆಯಲ್ಲಿ ಆತನಿಗೆ ಒಂದು ದೊಡ್ಡ ಔತಣವನ್ನು ಮಾಡಿಸಲು ಸುಂಕದವರೂ ಇತರರೂ ಗುಂಪಾಗಿ ಕೂಡಿ ಅವರ ಸಂಗಡ ಊಟಕ್ಕೆ ಕೂತುಕೊಂಡಿದ್ದರು.


ಒಂದು ಸಾರಿ ಎಲೀಷನು ಶೂನೇವಿುಗೆ ಹೋದನು. ಅಲ್ಲಿನ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.


ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳೊಳಗಿಂದ ತೆಗೆದುಬಿಡಬೇಕು. ಆ ದಿವಸ ಮೊದಲುಗೊಂಡು ಏಳು ದಿವಸಗಳೊಳಗೆ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನು ಇಸ್ರಾಯೇಲ್ಯರಿಂದ ತೆಗೆದು ಹಾಕಲ್ಪಡಬೇಕು.


ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.


ಸ್ವಾವಿುಗಳೇ, ನಿಮ್ಮ ದಾಸನ ಮನೆಗೆ ಬಂದು ಇಳುಕೊಂಡು ಕಾಲುಗಳನ್ನು ತೊಳಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡುಕೊಂಡು ಹೋಗಬಹುದು ಅಂದನು. ಅವರು - ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ,


ಬಂದಾಗ ಅವನಿಗೆ - ಯೆಹೋವನ ದಯೆಯನ್ನು ಹೊಂದಿದವನೇ, ಒಳಕ್ಕೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಎಂದು ಹೇಳಿದನು.


ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು; ಅವರೆಲ್ಲರೂ ಭೋಜನೋಪಚಾರಗಳನ್ನು ತೀರಿಸಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು