Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:34 - ಕನ್ನಡ ಸತ್ಯವೇದವು J.V. (BSI)

34 ಮಾರಣೇ ದಿನ ಹಿರಿಯವಳು ಕಿರಿಯವಳಿಗೆ - ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, “ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಮಾರನೆಯ ದಿನ ಹಿರಿಯಳು ಕಿರಿಯಳಿಗೆ, “ನಿನ್ನೆ ರಾತ್ರಿ ನಾನು ಅಪ್ಪನ ಸಂಗಡ ಮಲಗಿದ್ದೆ. ಈ ರಾತ್ರಿ ಕೂಡ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆಮೇಲೆ ನೀನು ಅವನ ಸಂಗಡ ಮಲಗಿಕೊ; ಹೀಗಾದರೂ ನಮ್ಮ ತಂದೆಯ ಸಂತಾನ ಉಳಿಸೋಣ”, ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಮರುದಿನ, ಹಿರಿಯ ಮಗಳು ತನ್ನ ತಂಗಿಗೆ, “ಕಳೆದ ರಾತ್ರಿ ನಾನು ನನ್ನ ತಂದೆಯೊಂದಿಗೆ ಮಲಗಿಕೊಂಡೆ. ಈ ರಾತ್ರಿಯೂ ಅವನನ್ನು ದ್ರಾಕ್ಷಾರಸ ಕುಡಿಸಿ ಅಮಲೇರಿಸೋಣ. ಆಮೇಲೆ ನೀನು ಹಾಸಿಗೆಯ ಮೇಲೆ ಅವನೊಂದಿಗೆ ಮಲಗಿಕೊಳ್ಳಬಹುದು. ಹೀಗೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಮರುದಿನ ಹಿರಿಯವಳು ಚಿಕ್ಕವಳಿಗೆ, “ಕಳೆದ ರಾತ್ರಿ ತಂದೆಯ ಸಂಗಡ ನಾನು ಮಲಗಿಕೊಂಡೆನು. ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ, ನೀನು ಹೋಗಿ ಅವನ ಸಂಗಡ ಮಲಗಿಕೋ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:34
7 ತಿಳಿವುಗಳ ಹೋಲಿಕೆ  

ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ಸೂಳೆಯ ಮುಖವುಳ್ಳವಳಾಗಿ ನಾಚಿಕೆಗೆಟ್ಟಿದ್ದೀ.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ; ತಮ್ಮ ಪಾಪವನ್ನು ಮರೆಮಾಜದೆ ಸೊದೋವಿುನವರಂತೆ ಮೆರೆಯಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.


ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು