Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:35 - ಕನ್ನಡ ಸತ್ಯವೇದವು J.V. (BSI)

35 ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆ ರಾತ್ರಿಯೂ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು. ಅವಳು ಯಾವಾಗ ತನ್ನ ಸಂಗಡ ಮಲಗಿದಳೋ, ಯಾವಾಗ ಎದ್ದು ಹೋದಳೋ ಏನೊಂದೂ ಅವನಿಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆ ರಾತ್ರಿಯೂ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಆಮೇಲೆ ಚಿಕ್ಕಮಗಳು ಅವನ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಆಕೆ ಮಲಗಿಕೊಂಡದ್ದು ಲೋಟನಿಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಆಗ ಚಿಕ್ಕವಳು ಎದ್ದು, ಅವನ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಂಡದ್ದೂ, ಎದ್ದು ಹೋದದ್ದೂ ಅವನಿಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:35
8 ತಿಳಿವುಗಳ ಹೋಲಿಕೆ  

ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಜಿತೇಂದ್ರಿಯರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರ್ರಿ.


ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು.


ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.


ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?


ಮಾರಣೇ ದಿನ ಹಿರಿಯವಳು ಕಿರಿಯವಳಿಗೆ - ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ ಎಂದು ಹೇಳಿದಳು.


ಹೀಗೆ ಲೋಟನ ಇಬ್ಬರು ಹೆಣ್ಣುಮಕ್ಕಳು ತಂದೆಯಿಂದ ಬಸುರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು