ಆದಿಕಾಂಡ 19:38 - ಕನ್ನಡ ಸತ್ಯವೇದವು J.V. (BSI)38 ಕಿರೀ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ ಬೆನವ್ಮಿು ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲ ಪುರುಷನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಕಿರಿಯ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಬೆನಮ್ಮಿ” (ರಕ್ತ ಸಂಬಂಧಿಕನ ಮಗ) ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಕಿರಿಯಳೂ ಗಂಡುಮಗುವನ್ನು ಹೆತ್ತು ಅದಕ್ಕೆ ‘ಬಿನಮ್ಮಿ’ ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಚಿಕ್ಕಮಗಳು ಸಹ ಗಂಡುಮಗುವನ್ನು ಹೆತ್ತಳು. ಆಕೆ ತನ್ನ ಮಗನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗ ಜೀವಿಸುತ್ತಿರುವ ಅಮ್ಮೋನಿಯರಿಗೆ ಬೆನಮ್ಮಿಯೇ ಮೂಲಪುರುಷ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಚಿಕ್ಕವಳು ಸಹ ಮಗನನ್ನು ಹೆತ್ತು, ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗಿನ ಅಮ್ಮೋನಿಯರಿಗೂ ಇವನೇ ತಂದೆ. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.