Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:4 - ಕನ್ನಡ ಸತ್ಯವೇದವು J.V. (BSI)

4 ಅವರು ಮಲಗುವದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋವಿುನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಸುತ್ತಿಕೊಂಡು ಲೋಟನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಮಲಗುವುದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋಮಿನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಮುತ್ತಿಗೆ ಹಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಅವರು ಮಲಗುವುದಕ್ಕೆ ಮುಂಚೆ ಆ ಸೊದೋಮ್ ಪಟ್ಟಣದ ಗಂಡಸರು, ಹುಡುಗರು-ಮುದುಕರು ಎನ್ನದೆ, ಎಲ್ಲರೂ ಬಂದು ಆ ಮನೆಯನ್ನು ಮುತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ರಾತ್ರಿ ಮಲಗುವುದಕ್ಕಿಂತ ಮುಂಚೆ ಸೊದೋಮಿನ ಗಂಡಸರೆಲ್ಲರೂ ಬಂದು ಲೋಟನ ಮನೆಯ ಸುತ್ತಲೂ ನಿಂತುಕೊಂಡು ಲೋಟನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಅವರು ಮಲಗುವುದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರವರೆಗೆ ಎಲ್ಲಾ ಜನರೂ ಪ್ರತಿಯೊಂದು ಮೂಲೆಯಿಂದ ಕೂಡಿ, ಮನೆಯನ್ನು ಸುತ್ತಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:4
12 ತಿಳಿವುಗಳ ಹೋಲಿಕೆ  

ಆದರೆ ಸೊದೋಮ್ ಪಟ್ಟಣದವರು ದುಷ್ಟರೂ ಯೆಹೋವನಿಗೆ ಮಹಾಪರಾಧಿಗಳೂ ಆಗಿದ್ದರು.


ಕೇಡುಮಾಡದಿದ್ದರೆ ಅವರಿಗೆ ನಿದ್ರೆಹತ್ತದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವದು.


ದುಷ್ಕಾರ್ಯವನ್ನು ಮಾಡುವವರು ಬಹು ಮಂದಿ ಆದಾಗ್ಯೂ ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


ಇದಲ್ಲದೆ ಯೆಹೋವನು - ಸೊದೋಮ್ ಗೊಮೋರಗಳ ವಿಷಯವಾಗಿ ಎಷ್ಟೋ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು;


ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.


ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು,


ಅರಣ್ಯದಲ್ಲಿ ಇಸ್ರಾಯೇಲ್ಯರ ಸಮೂಹವೆಲ್ಲಾ ಮೋಶೆ ಆರೋನರ ಮೇಲೆ ಗುಣುಗುಟ್ಟಿ


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚಜನರು ಬಂದು ಆ ಮನೆಯನ್ನು ಸುತ್ತಿಕೊಂಡು ಕದಗಳನ್ನು ಬಡಿದು ಮನೆಯ ಯಜಮಾನನಾದ ಮುದುಕನಿಗೆ - ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು ಎಂದು ಕೂಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು