Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:1 - ಕನ್ನಡ ಸತ್ಯವೇದವು J.V. (BSI)

1 ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹೀಗೆ ಭೂಮಿಯೂ ಆಕಾಶವೂ ಅವುಗಳಲ್ಲಿರುವ ಪ್ರತಿಯೊಂದೂ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ಸಂಪೂರ್ಣವಾಗಿ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:1
34 ತಿಳಿವುಗಳ ಹೋಲಿಕೆ  

ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.


ನನಗೂ ಇಸ್ರಾಯೇಲ್ಯರಿಗೂ ನಡುವೆ ಇದು ಸದಾಕಾಲವೂ ಗುರುತು. ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೆ ವಿಶ್ರವಿುಸಿಕೊಂಡನಲ್ಲವೇ.


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು. ಆದದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ದಿನವಾಗಿರಲಿ ಎಂದು ಆಶೀರ್ವದಿಸಿದನು.


ಆದಿಯಲ್ಲಿ ದೇವರು ಆಕಾಶವನ್ನೂ ಭೂವಿುಯನ್ನೂ ಉಂಟುಮಾಡಿದನು.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ; ಆತನೇ ದೇವರು, ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು; ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗನ್ನುತ್ತಾನೆ - ನಾನೇ ಯೆಹೋವನು, ಇನ್ನು ಯಾವನೂ ಅಲ್ಲ.


ಆಕಾಶಮಂಡಲವನ್ನುಂಟುಮಾಡಿ ಹರವಿ ಭೂಮಂಡಲವನ್ನೂ ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಚರರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗನ್ನುತ್ತಾನೆ -


ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್‍ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ.


ಭೂಲೋಕವನ್ನುಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ; ನನ್ನ ಕೈಗಳೇ ಆಕಾಶ ಮಂಡಲವನ್ನು ಹರಡಿದವು; ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.


ಭೂವಿು, ಆಕಾಶ, ಸಾಗರ, ಚರಾಚರ ಇವುಗಳನ್ನು ನಿರ್ಮಿಸಿದವನೂ ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ


ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶಮಂಡಲವನ್ನು ಹರವಿ ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ ಮನುಷ್ಯನೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ -


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ ಅದರ ಸೈನ್ಯವನ್ನೂ ಭೂವಿುಯನ್ನೂ ಅದರ ಮೇಲಿರುವದನ್ನೂ ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟು ಮಾಡಿ ಸಮಸ್ತ ಪ್ರಾಣಿಗಳ ಜೀವಾಧಾರನಾಗಿರುತ್ತೀ.


ಭೂಮ್ಯಾಕಾಶಗಳನ್ನುಂಟುಮಾಡಿದ ಇಸ್ರಾಯೇಲ್‍ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ ಜ್ಞಾನವಿವೇಕಗಳುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟದರಿಂದ ಆತನಿಗೆ ಸ್ತೋತ್ರವಾಗಲಿ.


ದೇವರ ಕೆಲಸಗಳು ಲೋಕಾದಿಯಿಂದ ಮುಗಿದು ಹೋಗಿ [ಆತನ ವಿಶ್ರಾಂತಿಯು ಸಿದ್ಧವಾಗಿದ್ದರೂ] ಆತನು - ನನ್ನ ವಿಶ್ರಾಂತಿಯಲ್ಲಿ ಇವರು ಸೇರುವದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು ಎಂಬದಾಗಿ ಹೇಳಿದೆನಷ್ಟೆ. ನಂಬಿರುವ ನಾವಾದರೋ ಆ ವಿಶ್ರಾಂತಿಯಲ್ಲಿ ಸೇರುತ್ತಲೇ ಇದ್ದೇವೆ.


ಅವರು ಕೇಳಿ ಏಕಮನಸ್ಸಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು - ಒಡೆಯನೇ, ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬದು ಆತನ ನಾಮಧೇಯ.


ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;


ಇಗೋ, ನೂತನಾಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆಬಾರದು.


ನನ್ನ ಕೈ ಭೂವಿುಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಸಿದ್ಧವಾಗಿ ನಿಲ್ಲುವವು.


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶ ಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂಬಾರದು ನಮಸ್ಕರಿಸಲೂಬಾರದು.


ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.


ದೇವರು ಒಣನೆಲಕ್ಕೆ ಭೂವಿುಯೆಂದೂ ಜಲಸಮೂಹಕ್ಕೆ ಸಮುದ್ರವೆಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೇದೆಂದು ನೋಡಿದನು.


ಅನ್ಯದೇವರುಗಳನ್ನಾಗಲಿ ಇಲ್ಲವೆ ಪೂಜಿಸಬಾರದೆಂದು ಆತನು ನಿಷೇಧಿಸಿರುವ ಸೂರ್ಯಚಂದ್ರನಕ್ಷತ್ರಗಳನ್ನಾಗಲಿ ಸೇವಿಸಿ ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ದುಷ್ಟವಾದದ್ದನ್ನು ನಡಿಸಿದರೆ


ಇವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಆಶ್ರಯಿಸಿ ಪೂಜಿಸಿದ ಸೂರ್ಯಚಂದ್ರತಾರಾಗಣಗಳ ಎದುರಿಗೆ ಹರಡಿಬಿಡುವರು; ಅವುಗಳನ್ನು ಯಾರೂ ಕೂಡಿಸಿ ಹೂಣಿಡುವದಿಲ್ಲ; ಅವು ಭೂವಿುಯ ಮೇಲೆ ಗೊಬ್ಬರವಾಗುವವು.


ಭೂವಿುಯ ಮೇಲೆ ಆಕಾಶವು ಎಷ್ಟು ಉನ್ನತವೋ ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.


ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವದಿಲ್ಲ?


ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರ ಗಣವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ - ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;


ಫಕ್ಕನೆ ಆ ದೂತನ ಸಂಗಡ ಪರಲೋಕಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು -


ನಕ್ಷತ್ರಸೈನ್ಯವೆಲ್ಲಾ ಕ್ಷಯಿಸುವದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವದು; ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಬೀಳುವದು.


ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿದ್ದೀ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು