Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:14 - ಕನ್ನಡ ಸತ್ಯವೇದವು J.V. (BSI)

14 ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರ್ ದೇಶದ ಮುಂದೆ ಹರಿಯುವದು. ನಾಲ್ಕನೆಯದು ಯೂಫ್ರೇಟೀಸ್ ನದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮೂರನೇ ನದಿಯ ಹೆಸರು ಟೈಗ್ರಿಸ್. ಇದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತದೆ. ನಾಲ್ಕನೆಯದು ಯೂಫ್ರೆಟಿಸ್ ನದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮೂರನೆ ನದಿಯ ಹೆಸರು ಟೈಗ್ರಿಸ್. ದಕ್ಷಿಣ ಅಸ್ಸೀರಿಯ ದೇಶದಲ್ಲಿ ಹರಿಯುತ್ತಿದ್ದ ನದಿ ಇದೇ. ನಾಲ್ಕನೆ ನದಿಯ ಹೆಸರು ಯೂಫ್ರೇಟೀಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮೂರನೆಯ ನದಿಯ ಹೆಸರು ಟೈಗ್ರಿಸ್; ಅದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತಿತ್ತು. ನಾಲ್ಕನೆಯ ನದಿಯು ಯೂಫ್ರೇಟೀಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:14
11 ತಿಳಿವುಗಳ ಹೋಲಿಕೆ  

ಮೊದಲನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲೆಂಬ ಮಹಾನದಿಯ ದಡದ ಮೇಲೆ ಇದ್ದು


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು;


ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ - ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಯಲ್ಲಿ ಕಟ್ಟಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು ಎಂದು ಹೇಳಿತು.


ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳೂ ನಿಮಗಾಗುವವು; ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದವರೆಗೂ ಮತ್ತು ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವದು.


ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಅದಕ್ಕೆ ಸೇರಿದ ಪ್ರದೇಶವೆಲ್ಲಕ್ಕೂ ಪ್ರಯಾಣಮಾಡಿರಿ. ಅವು ಯಾವವಂದರೆ - ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೇಟೀಸ್ ಎಂಬ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶ ಇವುಗಳೇ.


ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರಿಗೆ ತಮ್ಮ ಸಂಬಂಧಿಕರ ಎದುರಿನಲ್ಲಿಯೇ ವಾಸಸ್ಥಳ ಸಿಕ್ಕಿತು.


ಶೇಮನ ಸಂತಾನದವರು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರೇ.


ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ


ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತುವದು.


ಯೆಹೋವದೇವರು ಆ ಮನುಷ್ಯನನ್ನು ಕರಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.


ಸಮಸ್ತ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಶ್ಶೂರ್ಯರೆಲ್ಲರನ್ನೂ ನಾನು ನಿನಗೆ ವಿರುದ್ಧವಾಗಿ ಎಬ್ಬಿಸಿ ಎಲ್ಲಾ ಕಡೆಯಿಂದಲೂ ನಿನ್ನ ಮೇಲೆ ಬೀಳಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು