Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:4 - ಕನ್ನಡ ಸತ್ಯವೇದವು J.V. (BSI)

4 ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇದು ಆಕಾಶದ ಮತ್ತು ಭೂಮಿಯ ಚರಿತ್ರೆ. ದೇವರು ಭೂಮಿಯನ್ನು ಮತ್ತು ಆಕಾಶವನ್ನು ಸೃಷ್ಟಿಸಿದಾಗ ನಡೆದ ಸಂಗತಿಗಳೇ ಈ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದರು. ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:4
27 ತಿಳಿವುಗಳ ಹೋಲಿಕೆ  

ಆದಾಮನ ವಂಶದವರ ಚರಿತ್ರೆಯು - ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಉಂಟುಮಾಡಿದನು.


ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.


ಮಳೆಗೆ ತಂದೆಯುಂಟೋ? ಮಂಜಿನ ಹನಿಗಳನ್ನು ಪಡೆದವನು ಯಾರು?


ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು - ಯೆಹೋವನೇ ದೇವರು, ಯೆಹೋವನೇ ದೇವರು ಎಂದು ಕೂಗಿದರು.


ಯೆಹೋವನು ಯುದ್ಧಶೂರನು; ಆತನ ನಾಮಧೇಯವು ಯೆಹೋವನೇ.


ಎದೋಮನೆಂಬ ಏಸಾವನ ವಂಶಸ್ಥರು.


ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅದು ಬಹು ಒಳ್ಳೇದಾಗಿತ್ತು. ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.


ದೇವರು ಆ ಬೆಳಕನ್ನು ಒಳ್ಳೇದೆಂದು ನೋಡಿದನು. ದೇವರು ಬೆಳಕನ್ನೂ ಕತ್ತಲೆಯನ್ನೂ ಬೇರೆ ಬೇರೆ ಮಾಡಿ ಬೆಳಕಿಗೆ ಹಗಲೆಂದೂ ಕತ್ತಲೆಗೆ ಇರುಳೆಂದೂ ಹೆಸರಿಟ್ಟನು.


ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?


ಯೆಹೋವನೇ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿರುವಾತನು ನೀನಲ್ಲವೋ? ನೀನು ಜನಾಂಗಗಳ ಎಲ್ಲಾ ರಾಜ್ಯಗಳನ್ನು ಆಳುವವನಾಗಿರುತ್ತೀ. ನಿನ್ನ ಹಸ್ತದಲ್ಲಿ ಬಲಪರಾಕ್ರಮಗಳಿರುತ್ತವೆ; ನಿನ್ನೆದುರಿನಲ್ಲಿ ಯಾರೂ ನಿಲ್ಲಲಾರರು.


ವಂಶಾವಳಿಗಳ ಪ್ರಕಾರ ಲೇವಿಯ ಮಕ್ಕಳು ಯಾರಂದರೆ - ಗೇರ್ಷೋನ್ ಕೆಹಾತ್ ಮೆರಾರೀ ಇವರೇ. ಲೇವಿಯು ನೂರಮೂವತ್ತೇಳು ವರುಷ ಬದುಕಿದನು.


ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶಸ್ಥರ ಚರಿತ್ರೆ.


ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ. ಅಬ್ರಹಾಮನು ಇಸಾಕನನ್ನು ಪಡೆದನು.


ಅಬ್ರಹಾಮನಿಗೆ ಸಾರಳ ದಾಸಿಯಾದ ಐಗುಪ್ತ್ಯಳಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.


ಶೇಮನ ವಂಶದವರ ಚರಿತ್ರೆಯು. ಜಲಪ್ರಳಯವು ಕಳೆದು ಎರಡು ವರುಷಗಳಾದ ಮೇಲೆ ಶೇಮನು ನೂರು ವರುಷದವನಾಗಿ ಅರ್ಪಕ್ಷದನನ್ನು ಪಡೆದನು.


ನೋಹನ ಮಕ್ಕಳಾದ ಶೇಮ್ ಹಾಮ್ ಯೆಫೆತರ ವಂಶದವರ ಚರಿತ್ರೆಯು - ಜಲಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.


ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ - ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂವಿುಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂವಿುಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನಮಾಡಿರಿ ಅಂದನು.


ಆದಿಯಲ್ಲಿ ದೇವರು ಆಕಾಶವನ್ನೂ ಭೂವಿುಯನ್ನೂ ಉಂಟುಮಾಡಿದನು.


ಆಮೇಲೆ ಜಲಾಧಿಪತಿಯಾದ ದೂತನು - ಸದಾ ಇರುವಾತನೇ, ಪರಿಶುದ್ಧನೇ, ನೀನು ಹೀಗೆ ತೀರ್ಪುಮಾಡಿದ್ದರಲ್ಲಿ ನೀತಿಸ್ವರೂಪನಾಗಿದ್ದೀ.


ಕರ್ತನೇ, ಸರ್ವಶಕ್ತನಾದ ದೇವರೇ, ಸದಾ ಇರುವಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳಿದ್ದರಿಂದ ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವದೇನಂದರೆ - ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಾತನಿಂದ


ಇಸ್ರಾಯೇಲ್ಯರ ಅರಸನೂ ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಆದಿ, ಅಂತವೂ ನಾನೇ; ನಾನು ಹೊರತು ಯಾವ ದೇವರೂ ಇಲ್ಲ.


ಮಹೋನ್ನತನೂ ಮಹತ್ಕಾರ್ಯಗಳನ್ನು ನಡಿಸುವವನೂ ನೀನು; ದೇವರು ನೀನೊಬ್ಬನೇ.


ಆಗ ದೇವರು - ಬೆಳಕಾಗಲಿ ಅನ್ನಲು ಬೆಳಕಾಯಿತು.


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿ ಆ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


ನಾನು ಲೋಕಕ್ಕೆ ಅಸ್ತಿವಾರಹಾಕಿದಾಗ ನೀನು ಎಲ್ಲಿದ್ದಿ? ನೀನು ಜ್ಞಾನಿಯಾಗಿದ್ದರೆ ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು