Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:5 - ಕನ್ನಡ ಸತ್ಯವೇದವು J.V. (BSI)

5 ಯೆಹೋವದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ಗಿಡವಾದರೂ ಭೂವಿುಯಲ್ಲಿ ಇರಲಿಲ್ಲ, ಯಾವ ಪಲ್ಯವೂ ಹುಟ್ಟಿರಲಿಲ್ಲ. ಯಾಕಂದರೆ ಯೆಹೋವದೇವರು ಭೂವಿುಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ; ಭೂವಿುಯನ್ನು ವ್ಯವಸಾಯ ಮಾಡುವದಕ್ಕೆ ಮನುಷ್ಯನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವರಾದ ಸರ್ವೇಶ್ವರ ಸ್ವಾಮಿ ಪರಲೋಕ - ಭೂಲೋಕಗಳನ್ನು ಸೃಷ್ಟಿಮಾಡಿದಾಗ ಯಾವ ಗಿಡಗಳೂ ಭೂಮಿಯಲ್ಲಿ ಇರಲಿಲ್ಲ. ಯಾವ ಬೀಜವೂ ಮೊಳೆತಿರಲಿಲ್ಲ. ಏಕೆಂದರೆ ದೇವರಾದ ಸರ್ವೇಶ್ವರ ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡಲು ಮನುಷ್ಯನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಭೂಮಿಯ ಮೇಲೆ ಯಾವ ಮರಗಿಡಗಳೂ ಇರಲಿಲ್ಲ. ಭೂಮಿಯ ಮೇಲೆ ಯಾವ ಸಸಿಯೂ ಬೆಳೆಯುತ್ತಿರಲಿಲ್ಲ; ಯಾಕೆಂದರೆ ಯೆಹೋವನು ಭೂಮಿಯ ಮೇಲೆ ಇನ್ನೂ ಮಳೆಯನ್ನು ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡಲು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಭೂಮಿಯಲ್ಲಿ ಯಾವ ಗಿಡವೂ ಇನ್ನೂ ಬೆಳೆದಿರಲಿಲ್ಲ, ಯಾವ ಪಲ್ಯವೂ ಇನ್ನೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ. ಆಗ ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:5
15 ತಿಳಿವುಗಳ ಹೋಲಿಕೆ  

ಅವನು ಉತ್ಪತ್ತಿಯಾದ ಭೂವಿುಯನ್ನೇ ವ್ಯವಸಾಯ ಮಾಡುವದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಡಿಸಿಬಿಟ್ಟನು.


ಭೂವಿುಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿವಿುತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;


ಭೂವಿುಯ ಮೇಲೆ ಮಳೆಸುರಿಸಿ ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ.


ನೀನು ಭೂವಿುಯನ್ನು ವ್ಯವಸಾಯ ಮಾಡಿದರೂ ಇದು ಇನ್ನು ಮುಂದೆ ನಿನಗೆ ಫಲಿಸುವದಿಲ್ಲ. ನೀನು ಭೂಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಿರುವಿ ಅಂದನು.


ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು; ಕಾಯಿನನು ವ್ಯವಸಾಯಮಾಡುವವನಾದನು.


ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನೂ


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ.


ಆದರೂ ಭೂವಿುಯಿಂದ ಮಂಜು ಹಬ್ಬಿ ನೆಲವನ್ನೆಲ್ಲಾ ತೋಯಿಸುತ್ತಿತ್ತು.


ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;


ಆತನ ಗರ್ಜನೆಗೆ ಆಕಾಶದಲ್ಲಿ ನೀರು ಮೊರೋ ಎನ್ನುತ್ತದೆ; ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು