Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:1 - ಕನ್ನಡ ಸತ್ಯವೇದವು J.V. (BSI)

1 ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಹೋಗುತ್ತಾ ಹೋಗುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿಕೊಂಡು ಕೆಲವು ಕಾಲ ಗೆರಾರಿನಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸ ಮಾಡಿ ಕೆಲವು ಕಾಲ ಗೆರಾರಿನಲ್ಲೂ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಬ್ರಹಾಮನು ಅಲ್ಲಿಂದ ಕಾನಾನ್ ನಾಡಿನ ದಕ್ಷಿಣ ಪ್ರಾಂತಕ್ಕೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿದನು. ಕೆಲವು ಕಾಲ ಗೆರಾರಿನಲ್ಲೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಬ್ರಹಾಮನು ಅಲ್ಲಿಂದ ಹೊರಟು ನೆಗೆವ್‌ಗೆ ಪ್ರಯಾಣಮಾಡಿ ಕಾದೇಶಿಗೂ ಶೂರಿಗೂ ನಡುವೆ ಇದ್ದ ಗೆರಾರ್ ನಗರದಲ್ಲಿ ನೆಲೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಬ್ರಹಾಮನು ಅಲ್ಲಿಂದ ನೆಗೆವ ಕಡೆಗೆ ಕಾದೇಶಿಗೆ ಪ್ರಯಾಣಮಾಡಿ, ಕಾದೇಶ್ ಹಾಗೂ ಶೂರಿನ ಮಧ್ಯದ ಗೆರಾರಿನಲ್ಲಿ ಸ್ವಲ್ಪಕಾಲ ಪ್ರವಾಸಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:1
23 ತಿಳಿವುಗಳ ಹೋಲಿಕೆ  

ಇಸಾಕನು ಗೆರಾರಿನಲ್ಲಿ ವಾಸವಾಗಿದ್ದಾಗ ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯ ವಿಷಯದಲ್ಲಿ ವಿಚಾರಿಸಿದಾಗ ಅವನು - ರೆಬೆಕ್ಕಳು ಸುಂದರಿಯಾಗಿರುವದರಿಂದ ಈ ಸ್ಥಳದ ಜನರು ಈಕೆಯ ನಿವಿುತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.


ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರವಲ್ಲದೆ ಇನ್ನೂ ಒಂದು ಬರವು ಕಾನಾನ್‍ದೇಶಕ್ಕೆ ಬಂತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.


ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; ಕಾದೇಶ್ ಅರಣ್ಯವು ಕಂಪಿಸುತ್ತದೆ.


ಅಬ್ರಹಾಮನು ಮಧ್ಯಾಹ್ನದಲ್ಲಿ ಮಮ್ರೇತೋಪಿನ ತನ್ನ ಗುಡಾರದ ಬಾಗಲಲ್ಲಿ ಕೂತಿರುವಾಗ ಯೆಹೋವನು ಅವನಿಗೆ ದರ್ಶನಕೊಟ್ಟನು.


ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೂ ಹೊಡೆಯುತ್ತಾ ಹೋದನು.


ನೀವಿಬ್ಬರೂ ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿ ಇಸ್ರಾಯೇಲ್ಯರ ಮಧ್ಯದಲ್ಲಿ ನನಗೆ ವಿರೋಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆ ಹೋದದರಿಂದ ಹೀಗೆ ಆಗಬೇಕು.


ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾರಣ್ಯದಲ್ಲಿ ನಡೆದು ಕಾದೇಶ್‍ಬರ್ನೇಯಕ್ಕೆ ಸೇರಿದೆವು.


ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೇಶದಿಂದ ಬಿಡುಗಡೆಮಾಡಿಸಿದ್ದೂ ಇದನ್ನೆಲ್ಲಾ ತಾವು ತಿಳಿದೇ ಇದ್ದೀರಷ್ಟೆ. ಈಗ ನಾವು ತಮ್ಮ ರಾಜ್ಯದ ಕಟ್ಟ ಕಡೆಯ ಹತ್ತಿರವಿರುವ ಕಾದೇಶೆಂಬ ಊರಲ್ಲಿದ್ದೇವೆ.


ಅಲ್ಲಿಯೂ ಅವನ ಸೇವಕರು ಬಾವಿಯನ್ನು ಅಗೆದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು -


ಗೆರಾರಿನ ದನಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.


ಅಷ್ಟರಲ್ಲಿ ಇಸಾಕನು ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು.


ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ ಲೋಟನನ್ನೂ ಸಂಗಡ ಕರಕೊಂಡು ಐಗುಪ್ತ ದೇಶವನ್ನು ಬಿಟ್ಟು ಕಾನಾನ್‍ದೇಶದ ದಕ್ಷಿಣ ಪ್ರಾಂತ್ಯಕ್ಕೆ ಏರಿ ಬಂದನು.


ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇತ್ತು.


ಈ ಸಂಗತಿಯಿಂದ ಅಲ್ಲಿರುವ ಬಾವಿಗೆ ಲಹೈರೋಯಿ ಬಾವಿ ಎಂದು ಹೆಸರಾಯಿತು; ಅದು ಕಾದೇಶಿಗೂ ಬೆರೆದಿಗೂ ನಡುವೆ ಅದೆ.


ಅವಳು ಮರಳುಕಾಡಿನಲ್ಲಿ ಶೂರಿನ ಮಾರ್ಗದ ಒರತೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು -


ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.


ಆಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಅಮಾಲೇಕ್ಯರ ಸಮಸ್ತದೇಶವನ್ನೂ ಹಚಚೋನ್‍ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.


ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್‍ದೇಶದ ದಕ್ಷಿಣಸೀಮೆಗೆ ಮುಂದೆ ಮುಂದೆ ಹೋಗುತ್ತಾ ಇದ್ದನು.


ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರಿಗೆ ತಮ್ಮ ಸಂಬಂಧಿಕರ ಎದುರಿನಲ್ಲಿಯೇ ವಾಸಸ್ಥಳ ಸಿಕ್ಕಿತು.


ಬಳಿಕ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದ ಬಳಿಯಿಂದ ಪ್ರಯಾಣ ಮಾಡಿಸಲು ಅವರು ಶೂರಿನ ಅರಣ್ಯದೊಳಗೆ ಮೂರು ದಿನ ನಡೆದು ಹೋದರು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.


ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹುದಿವಸ ಇಳುಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು