ಆದಿಕಾಂಡ 20:13 - ಕನ್ನಡ ಸತ್ಯವೇದವು J.V. (BSI)13 ನಾನು ದೇವಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವದಕ್ಕೆ ಹೊರಟಾಗ ನಾನು ಆಕೆಗೆ - ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ಉಪಕಾರವಾಗಬೇಕು, ಏನಂದರೆ ನೀನು ನನ್ನನ್ನು ಅಣ್ಣನೆಂಬದಾಗಿ ಹೇಳಬೇಕೆಂದು ಬೋಧಿಸಿದೆನು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ದೇವರ ಸಂಕಲ್ಪಕ್ಕೆ ತಲೆಬಾಗಿ, ತಂದೆಯ ಮನೆಯನ್ನು ಬಿಟ್ಟು, ದೇಶಾಂತರ ಹೋಗಲು ಹೊರಟಾಗ ಈಕೆಗೆ, ‘ನಿನ್ನಿಂದ ನನಗೊಂದು ಉಪಕಾರವಾಗಬೇಕು; ಅದೇನೆಂದರೆ, ನಾವು ಹೋದಕಡೆಯೆಲ್ಲಾ ನಾನು ನಿನಗೆ ಅಣ್ಣನಾಗಬೇಕೆಂದು ಹೇಳು,’ ಎಂದು ತಿಳಿಸಿದೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದೇವರು ನನ್ನನ್ನು ತಂದೆಯ ಮನೆಯಿಂದ ಹೊರಡಿಸಿ ಪರಸ್ಥಳಗಳಲ್ಲಿ ಸಂಚರಿಸುವಂತೆ ಮಾಡಿದ್ದರಿಂದ ನಾನು ಸಾರಳಿಗೆ, ‘ನಿನ್ನಿಂದ ನನಗೆ ಒಂದು ಉಪಕಾರವಾಗಬೇಕು. ಅದೇನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು ಎಂದು ಆಕೆಗೆ ತಿಳಿಸಿದೆನು’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದೇವರು ನನ್ನ ತಂದೆಯ ಮನೆಯೊಳಗಿಂದ ನನ್ನನ್ನು ದೇಶಾಂತರಕ್ಕೆ ಕರೆದಾಗ, ನಾನು ಅವಳಿಗೆ, ನೀನು ನನಗೆ ತೋರಿಸತಕ್ಕ ದಯೆಯು ಯಾವುದೆಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ, ‘ಇವನು ನನ್ನ ಅಣ್ಣ,’ ಎಂದು ಹೇಳು ಎಂದು ತಿಳಿಸಿದೆನು,” ಎಂದನು. ಅಧ್ಯಾಯವನ್ನು ನೋಡಿ |