ಆದಿಕಾಂಡ 20:3 - ಕನ್ನಡ ಸತ್ಯವೇದವು J.V. (BSI)3 ಆದರೆ ರಾತ್ರಿಯಲ್ಲಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು - ನೀನು ಆ ಸ್ತ್ರೀಯನ್ನು ಸೇರಿಸಿಕೊಂಡದರಿಂದ ಸಾಯತಕ್ಕವನಾಗಿದ್ದಿ; ಆಕೆ ಮುತ್ತೈದೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೆ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಆ ಮಹಿಳೆಯನ್ನು ಸೇರಿಸಿಕೊಂಡ ಕಾರಣ ಸಾಯತಕ್ಕವನು, ಆಕೆಗೆ ಗಂಡನಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ದೇವರು ಅಬೀಮೆಲೆಕನಿಗೆ ರಾತ್ರಿಯ ಕನಸಿನಲ್ಲಿ ಬಂದು, “ನೀನು ಆ ಸ್ರೀಯನ್ನು ತೆಗೆದುಕೊಂಡ ಕಾರಣ ಸಾಯತಕ್ಕವನಾಗಿದ್ದಿ, ಏಕೆಂದರೆ ಆಕೆಯು ಆ ಮನುಷ್ಯನ ಹೆಂಡತಿ,” ಎಂದು ಅವನಿಗೆ ಹೇಳಿದರು. ಅಧ್ಯಾಯವನ್ನು ನೋಡಿ |