ಆದಿಕಾಂಡ 20:5 - ಕನ್ನಡ ಸತ್ಯವೇದವು J.V. (BSI)5 ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ತಾನೇ ಹೇಳಲಿಲ್ಲವೇ. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯರ್ಥಾರ್ಥಮನಸ್ಸಿನಿಂದಲೂ ಶುದ್ಧಹಸ್ತದಿಂದಲೂ ಇದನ್ನು ಮಾಡಿದೆನು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ಮನುಷ್ಯನೇ ಈಕೆ ನನಗೆ ತಂಗಿಯಾಗಬೇಕೆಂದು ಹೇಳಿದ; ಈಕೆಯೂ ಆತನು ನನಗೆ ಅಣ್ಣನಾಗಬೇಕೆಂದು ಹೇಳಿದಳು. ಶುದ್ಧಮನಸ್ಸಿನಿಂದ ಹಾಗೂ ಶುದ್ಧಹಸ್ತದಿಂದ ಈ ಕಾರ್ಯಮಾಡಿದೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ‘ಈಕೆ ನನಗೆ ತಂಗಿಯಾಗಬೇಕು’ ಎಂದು ಅಬ್ರಹಾಮನೇ ಹೇಳಿದನು. ಅಲ್ಲದೆ ಈಕೆಯೂ ‘ಅವನು ನನ್ನ ಸಹೋದರ’ ಎಂದು ಹೇಳಿದಳು. ನಾನು ನಿರಪರಾಧಿ. ನಾನು ಮಾಡಲಿದ್ದ ತಪ್ಪು ನನಗೆ ತಿಳಿದಿರಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವನು ನನಗೆ, ‘ಅವಳು ನನ್ನ ತಂಗಿ,’ ಎಂದು ಹೇಳಲಿಲ್ಲವೋ? ಅವಳೇ, ‘ಅವನು ನನ್ನ ಅಣ್ಣ,’ ಎಂದು ಹೇಳಿದ್ದಾಳೆ. ಆದ್ದರಿಂದ ನಾನು ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಹಸ್ತದಿಂದಲೂ ಇದನ್ನು ಮಾಡಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |