ಆದಿಕಾಂಡ 20:9 - ಕನ್ನಡ ಸತ್ಯವೇದವು J.V. (BSI)9 ಆಮೇಲೆ ಅವನು ಅಬ್ರಹಾಮನನ್ನು ಕರಿಸಿ - ನೀನು ನಮಗೆ ಮಾಡಿದ್ದೇನು? ನಾನು ಯಾವ ತಪ್ಪು ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ಮಾಡಬಾರದ ಕಾರ್ಯಗಳನ್ನು ನನಗೆ ಮಾಡಿದೆ ಎಂದು ಹೇಳಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಬೀಮೆಲೆಕನು ಅಬ್ರಹಾಮನನ್ನು ಕರೆದು, “ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅನಂತರ ಅವನು ಅಬ್ರಹಾಮನನ್ನು ಕರೆಸಿ, “ನೀನು ನನಗೆ ಮಾಡಿದ್ದೇನು? ಯಾವ ತಪ್ಪಿಗಾಗಿ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಈ ಮಹಾ ಪಾತಕಕ್ಕೆ ಒಳಪಡಿಸಿದೆ? ಮಾಡಬಾರದ ಕಾರ್ಯವನ್ನು ನೀನು ಮಾಡಿದೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಮೇಲೆ ಅಬೀಮೆಲೆಕನು ಅಬ್ರಹಾಮನನ್ನು ಕರೆಸಿ, “ನೀನು ನನಗೆ ಹೀಗೇಕೆ ಮಾಡಿದೆ? ನಿನಗೆ ವಿರೋಧವಾಗಿ ನಾನೇನು ಮಾಡಿದೆ? ಆಕೆ ತಂಗಿಯಾಗಬೇಕೆಂದು ನೀನೇಕೆ ಸುಳ್ಳು ಹೇಳಿದೆ? ನೀನು ನನ್ನ ರಾಜ್ಯಕ್ಕೆ ಕೇಡನ್ನು ಬರಮಾಡಿರುವೆ. ನೀನು ಹೀಗೆ ಮಾಡಬಾರದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅಬೀಮೆಲೆಕನು ಅಬ್ರಹಾಮನನ್ನು ಕರೆದು ಅವನಿಗೆ, “ನೀನು ನಮಗೆ ಮಾಡಿದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಿನಗೆ ನಾನು ಏನು ಅಪರಾಧ ಮಾಡಿದ್ದೇನೆ? ನೀನು ನನಗೆ ಮಾಡಬಾರದ ಕೆಲಸಗಳನ್ನು ಮಾಡಿದ್ದೀಯೆ,” ಎಂದನು. ಅಧ್ಯಾಯವನ್ನು ನೋಡಿ |