Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:12 - ಕನ್ನಡ ಸತ್ಯವೇದವು J.V. (BSI)

12 ಆದರೆ ದೇವರು ಅವನಿಗೆ - ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ಕರಕರೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ ದೇವರು, ಅಬ್ರಹಾಮನಿಗೆ, “ನಿನ್ನ ಮಗನ ಹಾಗೂ ದಾಸಿಯ ಬಗ್ಗೆ ನಿನಗೆ ಚಿಂತೆಬೇಡ; ಸಾರಳು ಹೇಳಿದಂತೆಯೇ ಮಾಡು, ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ದೇವರು ಅಬ್ರಹಾಮನಿಗೆ, “ಆ ಹುಡುಗನ ಕುರಿತಾಗಲಿ ಸೇವಕಿಯ ಕುರಿತಾಗಲಿ ಚಿಂತೆಮಾಡಬೇಡ. ಸಾರಳ ಇಷ್ಟದಂತೆ ಮಾಡು. ಇಸಾಕನೊಬ್ಬನೇ ಬಾಧ್ಯಸ್ತನಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ದೇವರು ಅಬ್ರಹಾಮನಿಗೆ, “ಹುಡುಗನಿಗಾಗಿಯೂ, ನಿನ್ನ ದಾಸಿಗಾಗಿಯೂ ನೀನು ಚಿಂತಿಸಬೇಡ. ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು. ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:12
8 ತಿಳಿವುಗಳ ಹೋಲಿಕೆ  

ಹಾಗಲ್ಲ, ನಿನ್ನ ಪತ್ನಿಯಾದ ಸಾರಳಲ್ಲಿಯೇ ನಿನ್ನಿಂದ ಮಗನು ಹುಟ್ಟುವನು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರಬೇಕು.


ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರವೆಷ್ಟೆಂಬದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ ಎಂದು ಹೇಳಿದನು.


ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳಿಕೆಗೆ ಬೇಡವೆನ್ನುತ್ತಾರೆ.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ;


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನ ಸಂಗಡಲೇ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರುಷ ಇದೇ ಕಾಲದಲ್ಲಿ ಸಾರಳು ಅವನನ್ನು ಹೆರುವಳು ಅಂದನು.


ಆದರೂ ಶಾಸ್ತ್ರವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯನಾಗಬಾರದೆಂದು ಹೇಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು