Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:16 - ಕನ್ನಡ ಸತ್ಯವೇದವು J.V. (BSI)

16 ಮಗುವು ಸಾಯುವದನ್ನು ನೋಡಲಾರೆನು ಅಂದುಕೊಂಡು ಬಿಲ್ಲೆಸುಗೆಯಷ್ಟು ದೂರ ಹೋಗಿ ಅವನೆದುರಾಗಿ ಕೂತುಕೊಂಡು ಗಟ್ಟಿಯಾಗಿ ಅತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವಳು ಆ ಮಗುವನ್ನು ಒಂದು ಗಿಡದ ನೆರಳಿನಲ್ಲಿ ಬಿಟ್ಟು ಒಂದು ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು ಗಟ್ಟಿಯಾಗಿ ಅತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹಾಗರಳು ಸ್ವಲ್ಪ ದೂರ ನಡೆದುಹೋಗಿ ಕುಳಿತುಕೊಂಡು ತನ್ನ ಮಗನು ಸಾಯುವುದನ್ನು ನೋಡಲಾರದೆ ಅಳತೊಡಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು, “ಮಗುವಿನ ಸಾವನ್ನು ನಾನು ನೋಡಲಾರೆನು,” ಎಂದು ಹೇಳಿ ಸ್ವರವೆತ್ತಿ ಅತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:16
16 ತಿಳಿವುಗಳ ಹೋಲಿಕೆ  

ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತಾಳು, ನಾನಾದರೆ ನಿನ್ನನ್ನು ಮರೆಯೆ.


ನನ್ನ ಜನರಿಗೆ ಕೇಡು ಸಂಭವಿಸುವದನ್ನು ನೋಡಿ ನಾನು ಸಹಿಸುವದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವದು ಹೇಗೆ ಎಂದು ಬಿನ್ನವಿಸಿದಳು.


ಆಗ ಜೀವದಿಂದಿದ್ದ ಕೂಸಿನ ನಿಜವಾದ ತಾಯಿ ಕೂಸಿನ ವಿಷಯದಲ್ಲಿ ಕರುಳುಮರುಗಿ - ನನ್ನ ಒಡೆಯಾ, ಬೇಡ; ಬದುಕಿರುವ ಕೂಸನ್ನು ಅವಳಿಗೇ ಕೊಟ್ಟುಬಿಡು; ಅದನ್ನು ಕೊಲ್ಲಿಸಬೇಡ ಎಂದು ಬೇಡಿಕೊಳ್ಳುವಲ್ಲಿ ಎರಡನೆಯವಳು - ಅದು ನನಗೂ ಬೇಡ, ನಿನಗೂ ಬೇಡ, ಕಡಿಯಲಿ ಎಂದು ಕೂಗಿದಳು.


ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಅವರು ತಮ್ಮಿಂದಾಗುವಷ್ಟು ಕಾಲ ಗಟ್ಟಿಯಾಗಿ ಅತ್ತರು.


ದಾವೀದನ ಮಾತುಗಳು ಮುಗಿದನಂತರ ಸೌಲನು - ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ ಅಂದು ಗಟ್ಟಿಯಾಗಿ ಅತ್ತನು.


ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ವಿಶ್ರಾಂತಿಯಿಂದಿರುವಂತೆ ಯೆಹೋವನು ಅನುಗ್ರಹಿಸಲಿ ಎಂದು ಹೇಳಿ ಅವರನ್ನು ಮುದ್ದಿಟ್ಟಳು. ಆಗ ಅವರು ಗಟ್ಟಿಯಾಗಿ ಅತ್ತು -


ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲ್ಯರೆಲ್ಲರೂ ಗಟ್ಟಿಯಾಗಿ ಅತ್ತರು.


ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗುವದಕ್ಕಾದೀತು? ತಂದೆಗೆ ಮಹಾ ಶೋಕವುಂಟಾಗುವದನ್ನು ನಾನು ನೋಡಕೂಡದು ಅಂದನು.


ಅವನು ರಾಹೇಲಳಿಗೆ ಮುದ್ದಿಟ್ಟು ಸ್ವರವೆತ್ತಿ ಕಣ್ಣೀರುಸುರಿಸಿ ಆಕೆಗೆ -


ಏಸಾವನು ಅವನಿಗೆ - ಅಪ್ಪಾ, ತಂದೆಯೇ, ನಿನ್ನಲ್ಲಿ ಆ ಒಂದೇ ಆಶೀರ್ವಾದವಿತ್ತೋ? ಅಪ್ಪಾ, ನನ್ನನ್ನು, ನನ್ನನ್ನೂ ಆಶೀರ್ವದಿಸಬೇಕು


ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಹಾಕಿ


ಆಕೆಯು ಅವನಿಗೆ - ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿಯಿರುವದಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಹೆಕ್ಕಿ ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ ಎಂದು ಉತ್ತರಕೊಟ್ಟಳು.


ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು, ನಿಮ್ಮ ಗಾಯನಗಳನ್ನೆಲ್ಲಾ ಶೋಕಗೀತಕ್ಕೆ ತಿರುಗಿಸುವೆನು; ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು ತಲೆಬೋಳಿಸಿಕೊಳ್ಳುವಂತೆ ಮಾಡುವೆನು; ನಿನ್ನ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವದು, ಅದು ಆದ ಮೇಲೂ ವ್ಯಾಕುಲವು ಇದ್ದೇ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು