ಆದಿಕಾಂಡ 21:17 - ಕನ್ನಡ ಸತ್ಯವೇದವು J.V. (BSI)17 ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು - ಹಾಗರಳೇ, ನಿನಗೇನಾಯಿತು? ಅಂಜಬೇಡ; ಆ ಹುಡುಗನು ಬಿದ್ದಿರುವ ಸ್ಥಳದಿಂದಲೇ ಅವನ ಶಬ್ದವು ದೇವರಿಗೆ ಕೇಳಿಸಿತು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಮಗುವಿನ ಕೂಗು ದೇವರಿಗೆ ಕೇಳಿಸಿತು. ಆಗ ದೇವದೂತನು ಆಕಾಶದಿಂದ ಆಕೆಯನ್ನು ಕರೆದು, “ಹಾಗರಳೇ, ನಿನಗೇನಾಯಿತು? ಭಯಪಡಬೇಡ; ಮಗುವಿನ ಕೂಗನ್ನು ಯೆಹೋವನು ಕೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೇವರು ಆ ಹುಡುಗನ ಅಳುವ ಸ್ವರವನ್ನು ಕೇಳಿದರು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು, ಆಕೆಗೆ, “ಹಾಗರಳೇ, ವ್ಯಥೆಪಡುವುದೇಕೆ? ಅಂಜಬೇಡ ದೇವರು ಹುಡುಗನ ಸ್ವರವನ್ನು ಕೇಳಿದ್ದಾರೆ. ಅಧ್ಯಾಯವನ್ನು ನೋಡಿ |