Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:22 - ಕನ್ನಡ ಸತ್ಯವೇದವು J.V. (BSI)

22 ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ - ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನಾದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ದಿನಗಳಲ್ಲಿ ಅಬೀಮೆಲೆಕನು ತನ್ನ ಸೇನಾಪತಿಯಾದ ಫೀಕೋಲನ ಸಮೇತ ಅಬ್ರಹಾಮನ ಬಳಿಗೆ ಬಂದು, “ನೀನು ಮಾಡುವ ಕೆಲಸಕಾರ್ಯಗಳಲ್ಲೆಲ್ಲಾ ದೇವರು ನಿನ್ನ ಸಂಗಡ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಮೇಲೆ ಅಬೀಮೆಲೆಕನು ಮತ್ತು ಫೀಕೋಲನು ಅಬ್ರಹಾಮನೊಡನೆ ಮಾತಾಡಿದರು. ಫೀಕೋಲನು ಅಬೀಮೆಲೆಕನ ಸೈನ್ಯಾಧಿಕಾರಿಯಾಗಿದ್ದನು. ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಮಾಡುವ ಪ್ರತಿಯೊಂದರಲ್ಲೂ ದೇವರು ನಿನ್ನೊಡನೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ಕಾಲದಲ್ಲಿ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಕಾರ್ಯಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:22
22 ತಿಳಿವುಗಳ ಹೋಲಿಕೆ  

ಅಲ್ಲಿಯೂ ಅವನ ಸೇವಕರು ಬಾವಿಯನ್ನು ಅಗೆದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು -


ಆಗ ಯೆಹೋವನು ಯೆಹೋಶುವನಿಗೆ - ನಾನು ಇಂದಿನಿಂದ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂಬದು ಅವರಿಗೆ ಗೊತ್ತಾಗುವದು.


ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡುಬಂದದರಿಂದ ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.


ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿದನಾದ್ದರಿಂದ ಗೆರಾರಿನ ಅರಸನಾದ ಅಬೀಮೆಲೆಕನು ಕರೇಕಳುಹಿಸಿ ಆಕೆಯನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡನು.


ದ್ರವ್ಯಾಶೆಯಿಲ್ಲದವರಾಗಿರಿ; ನಿಮಗಿರುವವುಗಳಲ್ಲಿ ತೃಪ್ತರಾಗಿರಿ; ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ, ಎಂದಿಗೂ ತೊರೆಯುವದಿಲ್ಲವೆಂದು ದೇವರು ತಾನೇ ಹೇಳಿದ್ದಾನೆ.


ಅವನ ಹೃದಯದ ರಹಸ್ಯಗಳು ಬೈಲಾಗುವವು; ಮತ್ತು ಅಡ್ಡಬಿದ್ದು ದೇವರನ್ನು ಆರಾಧಿಸಿ - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬದನ್ನು ಪ್ರಚುರ ಪಡಿಸುವನು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಆಲೋಚನೆಮಾಡಿಕೊಳ್ಳಿರಿ, ಅದು ಮುರಿದುಹೋಗುವದು; ಅಪ್ಪಣೆಮಾಡಿರಿ, ಅದು ನಿಲ್ಲದು; ದೇವರು ನಮ್ಮ ಕೂಡ ಇದ್ದಾನಷ್ಟೆ.


ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ಜನಾಂಗಗಳ ವಿವಿಧಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು - ನಾವು ನಿಮ್ಮೊಂದಿಗೆ ಬರುವೆವು, ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ ಎಂದು ಹೇಳುವರು.


ಯೆಹೋವನ ಈ ಮಾತನ್ನು ಕೇಳಿರಿ - ಐಗುಪ್ತದ ಆದಾಯವೂ ಕೂಷಿನ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.


ದಾವೀದನ ಮಗನಾದ ಸೊಲೊಮೋನನು ತನ್ನ ದೇವರಾದ ಯೆಹೋವನಿಂದ ಸಹಾಯವನ್ನೂ ವಿಶೇಷವೃದ್ಧಿಯನ್ನೂ ಹೊಂದಿದವನಾಗಿ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡನು.


ಲಾಬಾನನು ಅವನಿಗೆ - ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ಇರು; ಯೆಹೋವನು ನಿನ್ನ ನಿವಿುತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದಿದ್ದೇನೆ.


ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ ಅವನ ಪತ್ನಿಯನ್ನೂ ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.


ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು.


ಆಗ ಅಬೀಮೆಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ -


ಅವರಿಗೆ ಹೇಳಿದ್ದೇನಂದರೆ - ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.


ಸಮುವೇಲನು ದೊಡ್ಡವನಾಗುತ್ತಾ ಬಂದನಷ್ಟೆ. ಯೆಹೋವನು ಅವನೊಡನೆ ಇದ್ದದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.


ಅಲ್ಲಿಂದ ತಿರುಗಿಕೊಂಡು ಚೀದೋನ್, ತೂರ್‍ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು ಇವುಗಳ ಮೇಲೆ ಯೆಹೂದ ಪ್ರಾಂತದ ದಕ್ಷಿಣ ದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.


ಅನಂತರ ಸೌಲನು ತನ್ನ ಮನೆಗೆ ಹೊರಟನು; ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು