Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:26 - ಕನ್ನಡ ಸತ್ಯವೇದವು J.V. (BSI)

26 ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಬೀಮೆಲೆಕನು, “ಈ ಕೃತ್ಯವನ್ನು ಮಾಡಿದವರು ಯಾರೆಂದು ನಾನರಿಯೆ; ನೀನೂ ನನಗೆ ತಿಳಿಸಲಿಲ್ಲ; ಇಲ್ಲಿಯವರೆಗೆ ನಾನು ಈ ಸಂಗತಿಯನ್ನು ಕೇಳಿಯೂ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅದಕ್ಕೆ ಅಬೀಮೆಲೆಕನು, “ಅದನ್ನು ಯಾರು ಮಾಡಿದರೋ ನನಗೆ ಗೊತ್ತಿಲ್ಲ. ಇಂದಿನವರೆಗೂ ನೀನು ಇದನ್ನು ನನಗೆ ಹೇಳಲೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದಕ್ಕೆ ಅಬೀಮೆಲೆಕನು, “ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆ. ನೀನೂ ನನಗೆ ತಿಳಿಸಲಿಲ್ಲ. ನಾನು ಇಂದಿನವರೆಗೂ ಅದನ್ನು ಕೇಳಲೂ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:26
4 ತಿಳಿವುಗಳ ಹೋಲಿಕೆ  

ಇದರಿಂದ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಹುಟ್ಟಿತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ಇದ್ದರು.


ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲಾತ್ಕಾರದಿಂದ ಸ್ವಾಧೀನಪಡಿಸಿಕೊಂಡದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು ಅಬೀಮೆಲೆಕನು -


ಆಗ ಅಬ್ರಹಾಮನು ಅಬೀಮೆಲೆಕನಿಗೆ ಕುರಿದನಗಳನ್ನು ದಾನಮಾಡಿದನು. ಹೀಗೆ ಅವರಿಬ್ಬರೂ ಒಡಂಬಡಿಕೆಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು