Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:30 - ಕನ್ನಡ ಸತ್ಯವೇದವು J.V. (BSI)

30 ಈ ಬಾವಿಯನ್ನು ತೋಡಿಸಿದವನು ನಾನೇ ಎಂಬದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಕುರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅದಕ್ಕೆ ಅಬ್ರಹಾಮನು, “ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ಈ ಏಳು ಕುರಿಮರಿಗಳನ್ನು ನನ್ನ ಕೈಯಿಂದ ನೀನು ಸ್ವೀಕರಿಸಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅಬ್ರಹಾಮನು “ಆ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಕುರಿಗಳನ್ನು ನನ್ನಿಂದ ಸ್ವೀಕರಿಸಿಕೊಳ್ಳಬೇಕು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅದಕ್ಕೆ ಅಬ್ರಹಾಮನು, “ನಾನೇ ಆ ಬಾವಿಯನ್ನು ಅಗೆದಿದ್ದೇನೆಂಬುದಕ್ಕೆ ಸಾಕ್ಷಿಯಾಗಿ ಆ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:30
8 ತಿಳಿವುಗಳ ಹೋಲಿಕೆ  

ಕೇಡುಮಾಡುವದಕ್ಕೋಸ್ಕರ ನಾನಂತೂ ಈ ಕುಪ್ಪೆಯನ್ನು ದಾಟಿ ನಿನ್ನ ಬಳಿಗೆ ಬರಕೂಡದು; ಹಾಗೆಯೇ ನೀನು ಈ ಕುಪ್ಪೆಯನ್ನೂ ಈ ಕಂಬವನ್ನೂ ದಾಟಿ ನನ್ನ ಬಳಿಗೆ ಬರಕೂಡದು; ಇದಕ್ಕೆ ಕುಪ್ಪೆಯೂ ಕಂಬವೂ ಈ ಎರಡೇ ಸಾಕ್ಷಿ.


ಎಲ್ಲಾ ಜನರಿಗೆ - ಇಗೋ, ಈ ಕಲ್ಲು ನಮ್ಮ ವಿಷಯದಲ್ಲಿ ಸಾಕ್ಷಿ ಹೇಳುವದು. ಯೆಹೋವನು ನಮಗೆ ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿರುವದರಿಂದ ನೀವು ನಿಮ್ಮ ದೇವರಾದ ಆತನನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧಸಾಕ್ಷಿಯಾಗಿರುವದು ಎಂದು ಹೇಳಿ


ತರುವಾಯ ಅಬ್ರಹಾಮನು ಹಿಂಡಿನ ಏಳು ಕುರಿಗಳನ್ನು ಪ್ರತ್ಯೇಕವಾಗಿ ಇರಿಸಲು ಅಬೀಮೆಲೆಕನು ಅವನನ್ನು


ನೀನು ಪ್ರತ್ಯೇಕವಾಗಿ ಇರಿಸಿರುವ ಈ ಏಳು ಕುರಿಗಳು ಯಾತಕ್ಕೆ ಎಂದು ಕೇಳಿದನು. ಅದಕ್ಕೆ ಅಬ್ರಹಾಮನು


(ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣು ಹಾಕಿ ಮುಚ್ಚಿದ್ದರು.)


ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ಮೇಲೆ ಫಿಲಿಷ್ಟಿಯರು ಮುಚ್ಚಿಹಾಕಿದ್ದರಿಂದ ಇಸಾಕನು ಅವುಗಳನ್ನು ತಿರಿಗಿ ತೆಗಿಸಿ ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು