Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:33 - ಕನ್ನಡ ಸತ್ಯವೇದವು J.V. (BSI)

33 ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲವೃಕ್ಷವನ್ನು ನೆಟ್ಟು ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅಬ್ರಹಾಮನು ಬೇರ್ಷೆಬದಲ್ಲಿ ವಿಶೇಷವಾದ ಒಂದು ಮರವನ್ನು ನೆಟ್ಟನು. ಆ ಸ್ಥಳದಲ್ಲಿ ಅವನು ಸದಾಕಾಲ ಜೀವಿಸುವ ದೇವರಾದ ಯೆಹೋವನಿಗೆ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು, ಅಲ್ಲಿ ನಿತ್ಯ ದೇವರಾಗಿರುವ ಯೆಹೋವ ದೇವರ ಹೆಸರನ್ನು ಹೇಳಿ ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:33
22 ತಿಳಿವುಗಳ ಹೋಲಿಕೆ  

ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.


ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ ಭೂವಿುಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ; ಆತನು ದಣಿದು ಬಳಲುವದಿಲ್ಲ; ಆತನ ವಿವೇಕವು ಪರಿಶೋಧನೆಗೆ ಅಗಮ್ಯ.


ಬೆಟ್ಟಗಳು ಉಂಟಾಗುವದಕ್ಕಿಂತ, ಭೂವಿುಯೂ ಅದರ ದೇಶಗಳೂ ನಿರ್ಮಾಣವಾಗುವದಕ್ಕಿಂತ ಮುಂಚಿನಿಂದ ಯುಗಯುಗಾಂತರಗಳಲ್ಲಿಯೂ ನೀನೇ ದೇವರು.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಅವನು ಅಲ್ಲಿಂದ ಹೊರಟು ಬೇತೇಲಿಗೆ ಮೂಡಲಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿಸಿ ಇಳುಕೊಂಡನು; ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರೂ ಇದ್ದವು. ಅಲ್ಲಿಯೂ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.


ತರುವಾಯ ಸೇತನು ಸಹ ಮಗನನ್ನು ಪಡೆದು ಅವನಿಗೆ ಎನೋಷ್ ಎಂಬ ಹೆಸರಿಟ್ಟನು; ಆ ಕಾಲದಲ್ಲಿ ಯೆಹೋವ ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವದಕ್ಕೆ ಪ್ರಾರಂಭವಾಯಿತು.


ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ ಎಂದು ಆಜ್ಞಾಪಿಸಿದನು;


ಹೇಗಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯಶಕ್ತಿಯೂ ದೇವತ್ವವೂ ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತವೆ; ಹೀಗಿರುವದರಿಂದ ಅವರು ಉತ್ತರವಿಲ್ಲದವರಾಗಿದ್ದಾರೆ.


ದಾನೇ, ನಿನ್ನ ದೇವರ ಜೀವದಾಣೆ ಎಂತಲೂ ಬೇರ್ಷೆಬ ಮಾರ್ಗದ ಜೀವದಾಣೆ ಎಂತಲೂ ಸಮಾರ್ಯದ ಪಾಪಮೂರ್ತಿಯ ಮೇಲೆ ಪ್ರಮಾಣಮಾಡುವವರು ಬಿದ್ದುಹೋಗುವರು, ಮತ್ತೆ ಏಳರು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಇಸ್ರಾಯೇಲ್ಯರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.


ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ ಯಾವ ವಿಧವಾದ ಮರದ ಅಶೇರವೆಂಬ ವಿಗ್ರಹ ಸ್ತಂಭವನ್ನೂ ನೆಡಬಾರದು;


ಅವನು ಆ ಬಾವಿಗೆ ಷಿಬಾ ಎಂದು ಹೆಸರಿಟ್ಟನು. ಆದದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ ಬೇರ್ಷೆಬ ಎಂದು ಹೆಸರಾಯಿತು.


ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.


ಇಸಾಕನು ಅಲ್ಲಿಂದ ಹೊರಟು ಗಟ್ಟಾ ಹತ್ತಿ ಬೇರ್ಷೆಬಕ್ಕೆ ಬಂದನು.


ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.


ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಸೇನಾಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೊರಟು ಹೋದರು.


ಯೆಹೋವನೇ ಯುಗಯುಗಾಂತರಗಳಲ್ಲಿಯೂ ಆಳುವನು.


ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ ಜೀವಿಸುವವನೆಂಬದು ಎಷ್ಟು ನಿಶ್ಚಯವೋ ಅಷ್ಟು ಖಂಡಿತವಾಗಿ ಪ್ರಮಾಣಮಾಡುವೆನು; ಏನಂದರೆ -


ಪೂರ್ವದಿಂದಲೂ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಅನಾದಿಯಿಂದ ನೀನು ಇದ್ದೀ.


ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾವಿುಯೇ, ನೀನು ಅನಾದಿಯಿಂದಿದ್ದೀಯಲ್ಲಾ; ನಾವು ಸಾಯೆವು. ಯೆಹೋವನೇ, [ನಮ್ಮ] ನ್ಯಾಯತೀರ್ಪಿಗಾಗಿ ಅವರನ್ನು ನೇವಿುಸಿದ್ದೀ; ಶರಣನೇ, [ನಮ್ಮ] ಶಿಕ್ಷೆಗಾಗಿ ಅವರನ್ನು ನಿಲ್ಲಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು