Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:9 - ಕನ್ನಡ ಸತ್ಯವೇದವು J.V. (BSI)

9 ಆದರೆ ಐಗುಪ್ತ್ಯಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ ಮಗನು ನಗುವದನ್ನು ಸಾರಳು ಕಂಡು ಅಬ್ರಹಾಮನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಜಿಪ್ಟಿನ ಹಾಗರಳಿಂದ ಅಬ್ರಹಾಮನಿಗೆ ಹುಟ್ಟಿದ ಹುಡುಗನು ತನ್ನ ಮಗ ಇಸಾಕನೊಡನೆ ನಕ್ಕುನಲಿದಾಡುವುದನ್ನು ಸಾರಳು ಕಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೊದಲು, ಈಜಿಪ್ಟಿನ ಸೇವಕಿಯಾದ ಹಾಗರಳಲ್ಲಿ ಒಬ್ಬ ಮಗನು ಹುಟ್ಟಿದ್ದನು. ಅವನಿಗೂ ಅಬ್ರಹಾಮನು ತಂದೆಯಾಗಿದ್ದನು. ಆದರೆ ಆ ಮೊದಲನೆ ಮಗನು ಇಸಾಕನಿಗೆ ತೊಂದರೆ ಕೊಡುವುದನ್ನು ಸಾರಳು ಗಮನಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಜಿಪ್ಟಿನವಳಾದ ಹಾಗರಳಿಗೆ ಅಬ್ರಹಾಮನಿಂದ ಜನಿಸಿದ ಮಗನು ಹಾಸ್ಯ ಮಾಡುವುದನ್ನು ಸಾರಳು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:9
19 ತಿಳಿವುಗಳ ಹೋಲಿಕೆ  

ಹಾಗರಳು ಅಬ್ರಾಮನಿಂದ ಮಗನನ್ನು ಹೆತ್ತಳು; ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.


ಆದರೆ ಪೂರ್ವದಲ್ಲಿ ಸ್ವಾಭಾವಿಕವಾಗಿ ಹುಟ್ಟಿದವನು ದೇವರಾತ್ಮ ಬಲದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಅದೆ.


ಅದರಲ್ಲಿ ಬರೆದಿರುವದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು; ಒಬ್ಬನು ತೊತ್ತಿನಿಂದ ಹುಟ್ಟಿದವನು, ಒಬ್ಬನು ಧರ್ಮಪತ್ನಿಯಿಂದ ಹುಟ್ಟಿದವನು.


ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.


ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ಭೋಗ್ಯ ವಸ್ತುಗಳನ್ನು ಜ್ಞಾಪಿಸಿಕೊಳ್ಳುತ್ತಾಳೆ; ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.


ಒಬ್ಬ ಹುಡುಗನಾದರೂ ಶುದ್ಧವೂ ಸತ್ಯವೂ ಆದ ನಡತೆಯಿಂದಲೇ ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.


ನನ್ನ ವಿರೋಧಿಗಳು - ನಿನ್ನ ದೇವರು ಎಲ್ಲಿ ಎಂದು ಯಾವಾಗಲೂ ನನ್ನನ್ನು ಗೇಲಿಮಾಡುವದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.


ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.


ಅವರು ದೇವಪ್ರೇಷಿತರನ್ನು ಗೇಲಿಮಾಡಿ ಆತನ ಮಾತುಗಳನ್ನು ತುಚ್ಫೀಕರಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ ಆತನ ಕೋಪಾಗ್ನಿಯು ಆತನ ಪ್ರಜೆಯ ಮೇಲೆ ಉರಿಯಹತ್ತಿತು, ಅದರ ತಾಪವು ಆರಿಹೋಗಲೇ ಇಲ್ಲ.


ದೂತರು ಎಫ್ರಾಯೀಮ್ ಮನಸ್ಸೆ ಜೆಬುಲೂನ್ ಪ್ರಾಂತಗಳಲ್ಲಿ ಪಟ್ಟಣದಿಂದ ಪಟ್ಟಣಕ್ಕೆ ಹೋಗುತ್ತಿರಲು ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.


ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.


ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು.


ಈಗಲಾದರೋ ನನಗಿಂತ ಚಿಕ್ಕ ವಯಸ್ಸಿನವರು ನನ್ನನ್ನು ಪರಿಹಾಸ್ಯ ಮಾಡುತ್ತಾರೆ; ಇವರ ತಂದೆಗಳನ್ನು ನನ್ನ ಮಂದೆನಾಯಿಗಳೊಡನೆಯೂ ಇರತಕ್ಕವರಲ್ಲವೆಂದು ತಳ್ಳಿಬಿಟ್ಟಿದ್ದೆನಲ್ಲಾ.


ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.


ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವದು; ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು