Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:12 - ಕನ್ನಡ ಸತ್ಯವೇದವು J.V. (BSI)

12 ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನ ದೂತನು, “ನಿನ್ನ ಮಗನನ್ನು ವಧಿಸಬೇಡ. ಅವನಿಗೆ ನೋವು ಮಾಡಬೇಡ. ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೂ ಹಿಂಜರಿಯಲಿಲ್ಲ; ಆದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ತೋರಿಬಂದಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರ ದೂತನು ಅಬ್ರಹಾಮನಿಗೆ, “ಹುಡುಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ; ಏಕೆಂದರೆ ನೀನು ದೇವರಿಗೆ ಭಯಪಡುತ್ತೀ ಎಂದು ಈಗ ನಾನು ತಿಳಿದಿದ್ದೇನೆ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವುದಕ್ಕೆ ಹಿಂಜರಿಯಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:12
42 ತಿಳಿವುಗಳ ಹೋಲಿಕೆ  

ಹೀಗಲ್ಲವಾದರೆ ಒಬ್ಬ ಮನುಷ್ಯನು - ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು, ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು ನೋಡೋಣ ಎಂದು ಹೇಳುವನಲ್ಲವೇ.


ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.


ವಿಷಯವು ತೀರಿತು; ಎಲ್ಲವೂ ಕೇಳಿ ಮುಗಿಯಿತು; ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು; ಮನುಷ್ಯರೆಲ್ಲರ [ಕರ್ತವ್ಯವು] ಇದೇ.


ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಷ್ಟಾಗಿ ಮಾಡಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಅಂದನು.


ಆಗಲಾತನು - ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು ಅಂದನು.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಯೆಹೋವನು ಆನಂದಿಸುವದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.


ಯಾವನು ಯೆಹೋವನಲ್ಲಿ ಭಯಭಕ್ತಿಯುಳ್ಳವನೋ ಅವನಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.


ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ಯೆಹೋವನ ಭಯವೇ ತಿಳುವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆ ಮಾಡುವರು.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಅದಕ್ಕೆ ಮೋಶೆ - ಭಯಪಡಬೇಡಿರಿ. ದೇವರು ನಿಮ್ಮನ್ನು ಪರೀಕ್ಷಿಸಬೇಕೆಂತಲೂ ತನಗೆ ಭಯಪಟ್ಟು ನೀವು ಪಾಪವನ್ನು ಮಾಡದೆ ಇರಬೇಕೆಂತಲೂ ಬಂದಿದ್ದಾನೆ ಅಂದನು.


ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.


ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿಕೊಡುವದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ; ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ. ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ;


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು.


ಅದಕ್ಕೆ ಅಬ್ರಹಾಮನು - ಈ ಸ್ಥಳದವರು ದೇವರ ಭಯವಿಲ್ಲದವರಾಗಿ ನನ್ನ ಹೆಂಡತಿಯ ನಿವಿುತ್ತ ನನ್ನನ್ನು ಕೊಂದಾರೆಂದು ನೆನಸಿದೆನು.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಹೊಂದುವವರಾದ ನಾವು ಕೃತಜ್ಞತೆಯುಳ್ಳವರಾಗಿದ್ದು ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಭಯದಿಂದಲೂ ಮಾಡೋಣ;


ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಹೀಗಾದರೆ ಅವರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ನಾನು ನಿಮಗೆ ಹಿತಮಾಡುವದನ್ನು ಬಿಟ್ಟು ವಿಮುಖನಾಗೆನು ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವದು.


ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.


ತನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸ ಸಮರ್ಥನಾಗಿದ್ದಾನೆಂದು ತಿಳುಕೊಂಡನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.


ಮೂರನೆಯ ದಿನದಲ್ಲಿ ಯೋಸೇಫನು ಅವರನ್ನು ಕರಸಿ - ನಾನು ದೇವರಿಗೆ ಭಯಪಡುವವನು; ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು - ದೇವರ ದಾಸರೆಲ್ಲರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.


ಅಬ್ರಹಾಮನು ಕಣ್ಣೆತ್ತಿ ನೋಡುವಾಗ ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದುತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.


ಯೆಹೋವನು ನುಡಿದದ್ದನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕೆ ಹಿಂದೆಗೆಯದೆ ಹೋದದ್ದರಿಂದ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು;


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು